Home ಕರಾವಳಿ ಸುದ್ದಿಜಯಪ್ರಕಾಶ್ ಹೆಗ್ಡೆ : ಅವಧಿ ವಿಸ್ತರಣೆ

ಜಯಪ್ರಕಾಶ್ ಹೆಗ್ಡೆ : ಅವಧಿ ವಿಸ್ತರಣೆ

by Kundapur Xpress

ಬೆಂಗಳೂರು : ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯವರ ಅಧಿಕಾರದ ಅವಧಿಯನ್ನು ರಾಜ್ಯ ಸರ್ಕಾರ ಜನವರಿ 31 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ ಇದರಿಂದಾಗಿ ರಾಜ್ಯ ಸರಕಾರಕ್ಕೆ ಜಾತಿ ಗೆಣತಿ ಕುರಿತ ವರದಿ ಸಲ್ಲಿಸಲು ಜಯಪ್ರಕಾಶ್ ಹೆಗ್ಡೆಯವರಿಗೆ ಹೆಚ್ಚುವರಿ ಕಾಲಾವಕಾಶ ಸಿಕ್ಕಂತಾಗಿದೆ

ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿ ಜನಗಣತಿ) ಸಲ್ಲಿಕೆಗೆ ಅಂತಿಮ ಸಿದ್ಧತೆ ನಡೆಸುತ್ತಿರುವ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹಾಗೂ ಆಯೋಗದ ಸದಸ್ಯರ ಅವಧಿ ನವಂಬರ್ 26ಕ್ಕೆ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಅವರನ್ನೇ ಮತ್ತೆ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ

Related Articles