ಬೆಳಗಾವಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮಂಗಳವಾರ ಬೆಳಗಾವಿ ಜಿಲ್ಲೆಗೆ ಆಗಮಿಸಲಿದ್ದು, ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಭೆ ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಚಿಕ್ಕೋಡಿಗೆ ಆಗಮಿಸಲಿರುವ ನಡ್ತಾ. ನಗರದ ಕಿವಡ ಮೈದಾನದಲ್ಲಿ ನಡೆಯಲಿರುವ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸುಮಾರು 4 ಸಾವಿರ ಪದಾಧಿಕಾರಿಗಳು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ, ಮಧ್ಯಾಹ್ನ ಬೆಳಗಾವಿಯಲ್ಲಿ ನಡೆಯುವ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಭೆಯಲ್ಲಿ ಭಾಗವಹಿಸುವರು. ನಂತರ, ಸಂಜೆ 4.30ಕ್ಕೆ ಬೆಳಗಾವಿಯಲ್ಲಿ ನಡೆಯಲಿರುವ ಜಿಲ್ಲೆಯ ಪ್ರಬುದ್ದರೆ ಜತೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದ್ದಾರೆ