ಕೋಟ: ಹೋಬಳಿ ವ್ಯಾಪ್ತಿಯ 14ನೆಯ ಕಾಡೂರು ಗ್ರಾಮ ಪಂಚಾಯಿತಿನಲ್ಲಿ ಜನ ಸಂಪರ್ಕ ಸಭೆ ಹಾಗೂ ಕಾಮಗಾರಿಗಳ ಪರಿಶೀಲನೆ ಗ್ರಾಮಸ್ಥರ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಉದ್ಘಾಟಿಸಿ ದೀಪವನ್ನು ಪ್ರಜ್ವಲಿಸಿ ಅವರು ಗ್ರಾಮದ ಸಮಸ್ಯೆಗಳು ಮತ್ತು ಅಭಿವೃದ್ಧಿ ವಿಷಯಗಳನ್ನು ಚರ್ಚಿಸಲು ಕಾಡೂರು ಗ್ರಾಮ ಪಂಚಾಯಿತಿನಲ್ಲಿ ಜನ ಸಂಪರ್ಕಸಭೆಯನ್ನು ಇಂದು ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದು ಪ್ರತಿಯೊಂದು ಗ್ರಾಮ ಪಂಚಾಯಿತಿನಲ್ಲಿ ಕೂಡ ಮುಂದಿನ ದಿನಗಳಲ್ಲಿ ಜನ ಸಂಪರ್ಕ ಸಭೆಯನ್ನು ಮಾಡಿ ಜನರ ಕೆಲವೊಂದು ಸಮಸ್ಯೆಗಳಿಗೆ ಸರಕಾರದಿಂದ ಸಿಗುವ ಯೋಜನೆಗಳ ಬಗ್ಗೆ ಪರಿಹರಿಸುವ ಭರವಸೆಯನ್ನು ಜನ ಸಂಪರ್ಕ ಸಭೆಯಲ್ಲಿ ಶಾಸಕರು ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಜಲಂಧರ ಶೆಟ್ಟಿ ವಹಿಸಿ ಪ್ರಸ್ತಾವಿಕ ಮಾತುಗಳನ್ನಾಡಿದರು.ಕಾರ್ಯಕ್ರಮದ ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ಪ್ರಭಾವತಿ, ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗಡೆ, ಬ್ರಹ್ಮಾವರ ತಾಲೂಕು ಪಂಚಾಯತಿನ ಕಾರ್ಯ ನಿರ್ವಹಣಾಧಿಕಾರಿ ಇಬ್ರಾಹಿಂಪುರ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶಭಾನ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು, ಅಟಲ್ ಪಿಂಚಣಿ ಇಲಾಖೆಯ ಅಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ, ಕಾರ್ಮಿಕ ಇಲಾಖೆ ಅಧಿಕಾರಿಗಳು, ಅರಣ್ಯ ಇಲಾಖೆ, ಕೃಷಿ ಇಲಾಖೆ ತೋಟಗಾರಿಕೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಮಗ್ರ ಮಾಹಿತಿಯನ್ನು ಗ್ರಾಮಸ್ಥರಿಗೆ ನೀಡಿದರು.ತದನಂತರ ಗ್ರಾಮಸ್ಥರ ಅಹವಾಲುಗಳನ್ನು ಶಾಸಕರು ಸ್ವೀಕರಿಸಿದರು, ಕಾರ್ಯಕ್ರಮದ ನಿರೂಪಣೆಯನ್ನು ಗ್ರಾಮ ಪಂಚಾಯಿತಿನ ಪಿಡಿಒ ಮಹೇಶ್ ಇವರು ನಿರ್ವಹಿಸಿದರು ಪಂಚಾಯಿತಿನ ಸದಸ್ಯರಾದ ಗಿರೀಶ್ ರಾವ್, ಧನ್ಯವಾದ ಸಮರ್ಪಿಸಿದರು.ಈ ಸಭೆಯಲ್ಲಿ ಕಾಡೂರು ಗ್ರಾಮ ಪಂಚಾಯತಿನ ನೂರಾರು ಗ್ರಾಮಸ್ಥರು ಭಾಗಿಯಾದರು.

