ಕುಂದಾಪುರ : ಸಾರ್ವಜನಿಕರ ಕುಂದು ಕೊರತೆಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಕುಂದಾಪುರ ಶಾಸ್ತ್ರಿಸರ್ಕಲ್ ಸಮೀಪದ ಆರ್.ಎನ್.ಶೆಟ್ಟಿ. ಸಭಾಭವನದಲ್ಲಿ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದ್ದು ಜನ ಸ್ಪಂದನ ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಎ.ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ ಮುಂದಿನ ದಿನಗಳಲ್ಲಿ ಜನಸ್ಪಂದನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಹೆಚ್ಚಾಗಿ ತಿಳಿಯುವಂತೆ ಪ್ರಚಾರ ನೀಡಿ. ಹೆಚ್ಚಿನ ಜನರಿಗೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಮತ್ತು ಈ ದಿನ ನೀಡಿದ ಅರ್ಜಿಗಳನ್ನು ಮುಂದಿನ ಜನಸ್ಪಂದನ ಕಾರ್ಯಕ್ರಮದೊಳಗೆ ವಿಲೇವಾರಿ ಮಾಡಬೇಕಾಗಿ ತಿಳಿಸಿದರು. ಸಾರ್ವಜನಿಕರು ಮುಂದಿನ ದಿನಗಳಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಶಾಸಕರು ವಿನಂತಿಸಿದರು
ಈ ಕಾರ್ಯಕ್ರಮದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟೆಹೊಳೆ ಜಿಲ್ಲಾಧಿಕಾರಿಯವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಉಪಸ್ಥಿತಿಯಲ್ಲಿ
ಕುಂದಾಪುರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ನೆರವೇರಿತು