301
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಮರಳಿ ಬಿಜೆಪಿಗೆ ಸೇರ್ಪಡೆ ಯಾಗುತ್ತಿದ್ದು, ಇಂದು ಬೆಳಗ್ಗೆ ಸೇರ್ಪಡೆ ಕಾರ್ಯಕ್ರಮ ನಿಗದಿಯಾಗಿದೆ. ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆಯಲ್ಲಿ ರೆಡ್ಡಿ ಬಿಜೆಪಿಯಿಂದ ದೂರವಾಗಿದ್ದರು. ಬಳಿಕ ಹಲವು ವರ್ಷಗಳ ಕಾಲ ರಾಜಕೀಯದಿಂದಲೇ ದೂರ ಉಳಿದಿದ್ದರು.
ನಂತರ ತಮ್ಮದೇ ‘ಕಲ್ಯಾಣ ರಾಜ್ಯ ಪ್ರಗತಿಪರ ಪಕ್ಷ’ ವನ್ನು ಸ್ಥಾಪಿಸಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದೀಗ ಮತ್ತೆ ಬಿಜೆಪಿಗೆ ಮರಳುತ್ತಿದ್ದಾರೆ. ಸೋಮವಾರ ಬೆಳಗ್ಗೆ 9 ಗಂಟೆಗೆ ಪಕ್ಷದ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ಸೇರಿದಂತೆ ಇತರೆ ಮುಖಂಡರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

