ನವದೆಹಲಿ : ಮಾಜಿ ಸಚಿವ, ಬಿಜೆಪಿ ನಾಯಕ ಜನಾರ್ದನ ರೆಡ್ಡಿಯವರು ಶನಿವಾರ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿ ಪಕ್ಷದ ಸಂಸ್ಥಾಪನ ದಿನ ಇಬ್ಬರು ನಾಯಕರನ್ನು ಭೇಟಿ ಮಾಡಿದ್ದು ನನ್ನ ಜೀವನದ ಅವಿಸ್ಮರಣೀಯ ದಿನ. ಭೇಟಿ ವೇಳೆ ರಾಜ್ಯದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಕೈಗೊ ಳ್ಳುವ ಬಗ್ಗೆ ಸಂತೋಷ್ ಹಾಗೂ ನಡ್ಡಾ ಅವರು ಕೆಲವೊಂದು ನಿರ್ದೇಶನಗಳನ್ನು ನೀಡಿದರು. ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಶ್ರಮಿಸುವೆ ಎಂದರು.