ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎರಡನೇ ‘ಜನ ಸ್ಪಂದನ’ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಬರೋಬ್ಬರಿ 12,372 ಮಂದಿ ಅಹವಾಲು ಸಲ್ಲಿಕೆ ಮಾಡಿದ್ದಾರೆ. ಈ ಪೈಕಿ ಸ್ಥಳದಲ್ಲೇ 246 ಅರ್ಜಿ ಇತ್ಯರ್ಥವಾಗಿದ್ದು, ವಿಲೇವಾರಿಗೆ ಬಾಕಿ ಇರುವ 12,126 ಅರ್ಜಿಗಳನ್ನು ಒಂದು ತಿಂಗಳ ಒಳಗಾಗಿ ಇತ್ಯರ್ಥಪಡಿಸುವಂತೆ ಸಿದ್ದರಾಮಯ್ಯ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ
ನವೆಂಬರ್ 27ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದಿದ್ದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ 4,030 ಅರ್ಜಿಗಳು ಸಲ್ಲಿಕೆಯಾಗಿದ್ದವು. ಕಳೆದ ಜನಸ್ಪಂದನಕ್ಕೆ ಹೋಲಿಸಿದರೆ ಗುರುವಾರ ವಿಧಾನಸೌಧ ಆವರಣದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಮೂರು ಪಟ್ಟು ಹೆಚ್ಚು ಅಹವಾಲುಗಳು ಸಲ್ಲಿಕೆಯಾಗಿವೆ. ವಿಧಾನಸೌಧ ಆವರಣದಲ್ಲಿ ನಡೆದ ಮೊದಲ ಜನತಾ ದರ್ಶನ ಇದಾಗಿತ್ತು
ರಾಜ್ಯದ ಮೂಲೆ ಮೂಲೆಗಳಿಂದ ಅಂಗವಿಕಲರು, ವಯೋವೃದ್ಧರು, ಗರ್ಭಿಣಿಯರು, ಬಾಣಂತಿಯರು ಸೇರಿದಂತೆ ಸಾವಿರಾರು ಮಂದಿ ನಾಗರಿಕರು ಮುಂಜಾನೆಯಿಂದಲೇ ವಿಧಾನಸೌಧ ಹೈಕೋರ್ಟ್ ಗೇಟ್ ಬಳಿ ಸಾಲು ಗಟ್ಟಿ ನಿಂತಿದ್ದರು ವಿಧಾನಸೌಧದ ಬಳಿ 29 ಕೌಂಟರಗಳನ್ನು ವ್ಯವಸ್ಥೆ ಮಾಡಲಾಗಿದ್ದು ಎಲ್ಲರಿಗೂ ಊಟ ಮತ್ತು ಸಾರಿಗೆ ವ್ಯ್ಸ್ಥೆ ಮಾಡಲಾಗಿತ್ತು