Home ಕರಾವಳಿ ಸುದ್ದಿ” ಬಾಕ್ಸಿಂಗ್ ಸ್ಪರ್ಧೆಯಲ್ಲಿ ಜನತಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ”

” ಬಾಕ್ಸಿಂಗ್ ಸ್ಪರ್ಧೆಯಲ್ಲಿ ಜನತಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ”

"Janata students qualify for national level in boxing competition"

by Kundapur Xpress

ಕಿರಿಮಂಜೇಶ್ವರ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಪ್ರತೀಕ್ ಪೂಜಾರಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕದೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡು ದಾಖಲೆಯ ಹೊಸ ಭಾಷ್ಯ ಬರೆದಿದ್ದಾರೆ.
14ರ ವಯೋಮಾನದ ಬಾಲಕರ ವಿಭಾಗದಲ್ಲಿ ಅತ್ಯಂತ ಜಿದ್ದಾಜಿದ್ದಿನಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಪ್ರತೀಕ್ ಪೂಜಾರಿ ಅಮೋಘ ಪ್ರದರ್ಶನ ನೀಡಿ, ಪ್ರಥಮ ಸ್ಥಾನ ಗಳಿಸಿಕೊಂಡು, ರಾಷ್ಟ್ರಮಟ್ಟದ ಬಾಕ್ಸಿಂಗ್ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.
ಇದೇ ಸ್ಪರ್ಧೆಯಲ್ಲಿ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಕೀರ್ತನಾ ದ್ವಿತೀಯ ಸ್ಥಾನ ಹಾಗೂ ಬಾಲಕರ ವಿಭಾಗದಲ್ಲಿ ಮೊಹಮದ್ ನಿಹಾನ್ ತೃತೀಯ ಸ್ಥಾನ ಪಡೆದರು.
ಜನತಾ ಸಮೂಹ ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಚಟುವಟಿಕೆಗಳಷ್ಟೇ ಆದ್ಯತೆಯನ್ನು ಕ್ರೀಡಾ ಚಟುವಟಿಕೆಗಳಿಗೂ ನೀಡುತ್ತಿದ್ದು, ಈಗಾಗಲೇ ಸಂಸ್ಥೆಯಿಂದ ಹಲವಾರು ವಿದ್ಯಾರ್ಥಿಗಳು ಕರಾಟೆ, ಬಾಕ್ಸಿಂಗ್, ಕಬ್ಬಡಿ ಪಂದ್ಯಾಟಗಳಲ್ಲಿ ಅಸಾಮಾನ್ಯ ಪ್ರತಿಭೆಯನ್ನು ಪ್ರದರ್ಶಿಸಿ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಉತ್ತಮ ಕ್ರೀಡಾಪಟುಗಳಾಗಿ ಭವಿಷ್ಯ ರೂಪಿಸಿಕೊಂಡಿದ್ದಾರೆ.

ರಾಜ್ಯಮಟ್ಟದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಗೆಲುವಿನ ನಗಾರಿಯೊಂದಿಗೆ ಸಂಸ್ಥೆಗೆ ಕೀರ್ತಿ ತಂದ ವಿಜೇತ ವಿದ್ಯಾರ್ಥಿಗಳಿಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು , ಕಾರ್ಯದರ್ಶಿಗಳು,ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕರು ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Related Articles

Leave a Comment

This site uses Akismet to reduce spam. Learn how your comment data is processed.