ಕುಂದಾಪುರ : ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಅನಾವರಣಗೊಳಿಸುವ ಪ್ರತಿಭಾ ದಿನಾಚರಣೆ ನಡೆಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರರವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.92.7 ಎಫ್ ನ ಶ್ರೀಮತಿ ಆರ್.ಜೆ.ನಯನಾ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿ ಪ್ರತಿಭೆಗಳಿಗೆ ಭವ್ಯವಾದ ವೇದಿಕೆ ಇದಾಗಿದ್ದು,ಪ್ರತಿಭೆ ನಿಂತ ನೀರಲ್ಲ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯು ಪ್ರತಿಭೆ ಹುದುಗಿರುತ್ತದೆ ಅದನ್ನು ಯಾವುದೇ ಹಿಂಜರಿಕೆಯಿಲ್ಲದೆ ಪ್ರದರ್ಶಿಸಿ ಅಂದಾಗ ಮಾತ್ರ ನಿಮ್ಮ ನಿಜವಾದ ಪ್ರತಿಭೆ ಗುರುತಿಸಲು ಸಾಧ್ಯವೆಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರ ಕನ್ನಡದ ರಾಯಭಾರಿ ಶ್ರೀ ಮನು ಹಂದಾಡಿಯವರು ಪ್ರತಿಭೆ ಮತ್ತು ಪ್ರೋತ್ಸಾಹದ ಕುರಿತಾಗಿ ಕುಂದಾಪುರ ಕನ್ನಡದಲ್ಲಿಯೇ ಹಾಸ್ಯಭರಿತವಾಗಿ ಮಾತನಾಡಿದರು
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಶೈಕ್ಷಣಿಕ ಮಾರ್ಗದರ್ಶಕರಾಗಿರುವ ಶ್ರೀಮತಿ ಚಿತ್ರಾ ಕಾರಂತ್ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ವೇದಿಕೆಯಲ್ಲಿ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಶ್ರೀ ಮಂಜು ಕಾಳಾವರ, ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ರಮೇಶ ಪೂಜಾರಿ ಉಪಸ್ಥಿತರಿದ್ದರು ಕಾರ್ಯಕ್ರಮದ ತೀರ್ಪುಗಾರರಾಗಿ ಕೆ.ಪಿ.ಎಸ್ ಕೋಟೇಶ್ವರದ ಸಹ ಶಿಕ್ಷಕರಾದ ಶ್ರೀ ರಮಾನಂದ ನಾಯ್ಕ್,ಆಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ನಾಗರತ್ನ ಜಿ.ಬಸ್ರೂರು ಸರಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಶ್ರೀಮತಿ ಅರ್ಪಣಾ ಹೆಗ್ಡೆ,ಹೆಮ್ಮಾಡಿ ಜನತಾ ಪ್ರೌಢಶಾಲೆಯ ಸಹ ಶಿಕ್ಷಕರಾದ ಶ್ರೀ ಜಗದೀಶ್ ಉಪಸ್ಥಿತರಿದ್ದರು
ಬೆಳಿಗ್ಗೆಯಿಂದ ಸಂಜೆಯವರೆಗೂ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ವಿಭಾಗವಾರು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು. ವ್ಯಯಕ್ತಿಕ ಮತ್ತು ಸಾಮೂಹಿಕ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತ್ರತೀಯ ಸ್ಥಾನಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.ವಿದ್ಯಾರ್ಥಿಗಳು ಪ್ರಾರ್ಥಿಸಿ,ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ಪ್ರಾಸ್ತಾವಿಕ ನುಡಿಯೊಂದಿಗೆ ಸ್ವಾಗತಿಸಿದರು,ಉಪನ್ಯಾಸಕ ಶ್ರೀ ಉದಯ ನಾಯ್ಕ ಕಾರ್ಯಕ್ರಮ ನಿರೂಪಿಸಿ, ಉಪ ಪ್ರಾಂಶುಪಾಲರಾದ ಶ್ರೀ ರಮೇಶ ಪೂಜಾರಿ ವಂದಿಸಿದರು