36
ಉಡುಪಿ: ಉಡುಪಿಯಲ್ಲಿ ನಡೆದ ಕರಾಟೆ ಸ್ಪರ್ಧೆಯಲ್ಲಿ ಜಯರಾಣಿ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ವಿವಿಧ ವಿಭಾಗಗಳಲ್ಲಿ ಬಹುಮಾನಗಳನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಸ್ಪರ್ಧೆಯಲ್ಲಿ 5ನೇ ತರಗತಿಯ ಸಾದ್ವಿನ್ ಪ್ರಥಮ ಸ್ಥಾನ ಹಾಗೂ 3ನೇ ತರಗತಿಯ ವಿಹಾನ್ ಪ್ರಥಮ ಸ್ಥಾನ ಪಡೆದುಕೊಂಡರು.
5ನೇ ತರಗತಿಯ ಜ್ವಲಂತ್, ಅಭಯ್ ಹಾಗೂ ಸಮರ್ಥ್.ಹೆಚ್ ದ್ವಿತೀಯ ಸ್ಥಾನ ಗಳಿಸಿದರೆ, 6ನೇ ತರಗತಿಯ ಸಮರ್ಥ್ ತೃತೀಯ ಸ್ಥಾನ ಪಡೆದುಕೊಂಡರು.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿಯೂ ಕ್ರೀಡಾ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.
ಜಯರಾಣಿ ಸಂಸ್ಥೆಯ ವಿದ್ಯಾರ್ಥಿಗಳ ಈ ಸಾಧನೆ ಸಂಸ್ಥೆಗೆ ಹೆಮ್ಮೆಯ ಸಂಗತಿಯಾಗಿದ್ದು, ಅವರ ಪ್ರತಿಭೆ ಹಾಗೂ ಪರಿಶ್ರಮಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.

