ಮಹಾರಾಷ್ಟ್ರ : ಶಿವಸೇನೆಯ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ ಜೋಶಿ ಅವರು ಶುಕ್ರವಾರ ಮುಂಜಾನೆ ನಿಧನ ಹೊಂದಿದರು ಅವರಿಗೆ 86 ವರ್ಷ ವಯಸ್ಸಾಗಿತ್ತು
ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಹಲವು ತಿಂಗಳಿನಿಂದ ಮನೋಹರ್ ಜೋಶಿಯವರು ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು
ಮನೋಹರ್ ಜೋಶಿ ಅವರು 1995 ರಿಂದ 1999 ರವರೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಆಗಿ ಸೇವೆ ಸಲ್ಲಿಸಿದ್ದರು ಶಿವಸೇನೆಯಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ ಅವರು ವಾಜಪೇಯಿ ಸರ್ಕಾರ ಅಧಿಕಾರದಲ್ಲಿದ್ದಾಗ 2002 ರಿಂದ 2004 ರವರೆಗೆ ಲೋಕಸಭಾ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು