ಕುಂದಾಪುರ: ಕುಂದಾಪುರದ ಖಾರ್ವಿಕೇರಿ ನಿವಾಸಿಯಾದ ರಾಘವೇಂದ್ರ ಶೇರುಗಾರ್ ಯಾನೆ ಬನ್ಸ್ ರಾಘು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆಕುಂದಾಪುರ ಪೊಲೀಸರು ಇಬ್ಬರು ಪ್ರಮುಖ ಆರೋಪಿಗಳನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ
ಶಿವಮೊಗ್ಗ ಮೂಲದ ಶಫಿಯುಲ್ಲಾ (40 ವರ್ಷ) ಹಾಗೂ ಇಮ್ರಾನ್ (43ವರ್ಷ) ಎಂಬವರನ್ನು ಶಿವಮೊಗ್ಗಾದ ರೈಲ್ವೆ ನಿಲ್ದಾಣದ ಬಳಿ ಬಂಧಿಸಿದ ಕುಂದಾಪುರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು ಘಟನೆ ನಡೆದ ಸ್ಥಳಗಳಲ್ಲಿ ಮಹಜರು ನಡೆಸಿ ಕೃತ್ಯಕ್ಕೆ ಬಳಸಿದ ಚೂರಿ ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಪೊಲೀಸ್ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ ಆರೋಪಿಗಳನ್ನು ವೈಧ್ಯಕೀಯ ತಪಾಸಣೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು ಇದೀಗ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ