ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಡಾll ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಭಾಗವಹಿಸಿದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಾತನಾಡಿ 94ಸಿ ಮತ್ತು 94 ಸಿ.ಸಿ ಹಕ್ಕು ಪತ್ರ ನೀಡುವಲ್ಲಿ ಕಂದಾಯ ಹಾಗೂ ಅರಣ್ಯ ಇಲಾಖೆಯವರು ಜಂಟಿ ಸಮೀಕ್ಷೆ ಮಾಡಿ ಕಂದಾಯ ಜಾಗವನ್ನು ಗುರುತಿಸಿ 94 ಸಿ ಹಾಗೂ 94 ಸಿ.ಸಿ ಅಡಿಯಲ್ಲಿ ಹಕ್ಕುಪತ್ರ ನೀಡುವಲ್ಲಿನ ಸಮಸ್ಯೆಯನ್ನು ನಿವಾರಿಸುವ ಬಗ್ಗೆ ಮತ್ತು ಜಲ ಜೀವನ್ ಮಿಷನ್ ಯೋಜನೆಯಡಿ ಅಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಯ ಪ್ರಗತಿಯ ಬಗ್ಗೆ ಸಂಬಂಧಿಸಿದ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನೀಲ್ ಕುಮಾರ್, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ. ಅರುಣ್ ಕೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು