ಕುಂದಾಪುರ : ಕಾಡೂರು ಗ್ರಾಮ ಪಂಚಾಯಿತಿನ ಆಶ್ರಯದಲ್ಲಿ ವಿವಿಧ ಸಂಸ್ಥೆಗಳ ಸಹಕಾರದಲ್ಲಿ ಗ್ರಾಮ ಪಂಚಾಯಿತಿನ ಸಭಾಂಗಣದಲ್ಲಿ ಇಂದು ವಿಕಾಸಿತ ಭಾರತ ಸಂಕಲ್ಪಯಾತ್ರೆ ಕಾರ್ಯಕ್ರಮ ನೆರವೇರಿತು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಶ್ರೀ ಕಿರಣ್ ಕುಮಾರ್ ಕೊಡ್ಗಿಯವರು,ದೇಶದ ಜನರ ಆರ್ಥಿಕ ಸ್ಥಿತಿ ಸುಧಾರಿಸುವ ಸದ್ದುದ್ದೇಶ 2047ರ ಹೊತ್ತಿಗೆ ಭಾರತ ಆರ್ಥಿಕವಾಗಿ ಸದೃಢವಾಗಬೇಕೆಂಬ ಸಂಕಲ್ಪದೊಂದಿಗೆ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ಆರಂಭಿಸಿದ ವಿಕಾಸ ಭಾರತ ಸಂಕಲ್ಪ ಯಾತ್ರೆ ಬೃಹತ್ ಅಭಿಯಾನವನ್ನು ಇಂದು ಕಾಡೂರು ಗ್ರಾಮ ಪಂಚಾಯತ್ ಆವರಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ವಿಧಾನಪರಿಷ ಸದಸ್ಯರಾದ *ಕೋಟ ಶ್ರೀನಿವಾಸ ಪೂಜಾರಿಯವರು ಕೇಂದ್ರ ಸರ್ಕಾರದ ಜನಪರ ಮುದ್ರಾ ಯೋಜನೆ, ಜನಧನ್, ಪಿ ಎಂ ವಿಶ್ವಕರ್ಮ ಉಜ್ವಲ ಸೇರಿದಂತೆ ವಿವಿಧ ಯೋಜನೆಗಳ ಮಾಹಿತಿಯನ್ನು ಎಲ್ಇಡಿ ವಾಹನಗಳ ಮೂಲಕ ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸುವ ಮೂಲಕ ಸರಕಾರದ ಯೋಜನೆಗಳ ಲಾಭ ಪಡೆದ ಫಲಾನುಭವಿಗಳನ್ನು ಒಗ್ಗೂಡಿಸಿ ಈ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳಿಗೆ ಅದರ ಲಾಭ ಸಿಗುವಂತೆ ಮಾಡುವ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡುವುದರ ಮೂಲಕ, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಡೂರು ಗ್ರಾಮ ಪಂಚಾಯತಿನ ಅಧ್ಯಕ್ಷರಾದ ಜಲಂಧರ್ ಶೆಟ್ಟಿ ವಹಿಸಿದರು. ಲೀಡ್ ಬ್ಯಾಂಕಿನ ಮ್ಯಾನೇಜರ್ ಪಿಂಜಾರ ಇವರು ಜನಕಲ್ಯಾಣಕ್ಕಾಗಿ ಬ್ಯಾಂಕ್ ಕಡೆಯಿಂದ ಸಿಗುವ ವಿವಿಧ ಸಬ್ಸಿಡಿ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು ಈ ಸಂದರ್ಭದಲ್ಲಿ ಕಾಡೂರು ಗ್ರಾಮ ಪಂಚಾಯಿತಿನ ಸದಸ್ಯರು, ವಿವಿಧ ಬ್ಯಾಂಕಿನ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.