ಉಡುಪಿ : ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏಕ ನಿವೇಶನ ನಕ್ಷೆ ಸಮಸ್ಯೆಗಳ ಬಗ್ಗೆ ನಡೆದ ಸಭೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ *ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಭಾಗವಹಿಸಿದರು
ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಗಳಲ್ಲಿ ವಾಸ್ತವ್ಯ ಮತ್ತು ವಾಸ್ತವ್ಯೇತರ ಕಟ್ಟಡ ನಿರ್ಮಾಣಕ್ಕೆ ಭೂಗಡಿ ಅಂಚಿನಿಂದ 6 ಮೀಟರ್ ಬಿಟ್ಟು ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡುವ ಬಗ್ಗೆ ಹಾಗೂ ಯೋಜನಾ ಮತ್ತು ಗ್ರಾಮಾಂತರ ಇಲಾಖೆಯ ಹೊಸ ಮಾರ್ಗಸೂಚಿಯಲ್ಲಿನ ಕೆಲವೊಂದು ವಿಚಾರಗಳು ಉಡುಪಿ ಜಿಲ್ಲೆಯ ಭಾಗಕ್ಕೆ ವಿಭಿನ್ನವಾಗಿದ್ದು ಏಕ ವಿನ್ಯಾಸ ನಕ್ಷೆ ಅನುಮೋದನೆ ತೊಂದರೆ ಆಗುತ್ತಿದ್ದು. ಕಾಯ್ದೆಯಲ್ಲಿನ ಎಲ್ಲಾ ಲೋಪ ದೋಷಗಳನ್ನು ಪಟ್ಟಿ ಮಾಡಿ ಜಿಲ್ಲಾಧಿಕಾರಿಗಳು ಹಾಗೂ ಶಾಸಕರೊಂದಿಗೆ ಚರ್ಚಿಸಿ. ಅಂತಿಮವಾಗಿ ಜಿಲ್ಲೆಗೆ ಪೂರಕವಾಗುವಂತೆ ಆದೇಶದಲ್ಲಿ ಸೂಕ್ತ ಮಾರ್ಪಾಟು ಮಾಡುವ ಬಗ್ಗೆ ರಾಜ್ಯ ಮಟ್ಟದಲ್ಲಿ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಸಭೆ ನಡೆಸಲು ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ತೀರ್ಮಾನಿಸಬೇಕು ಎಂದರು ಈಗಾಗಲೇ ಪಡೆದಿರುವ ಅರ್ಜಿಗಳನ್ನು ತ್ವರಿತಗತಿ ವಿಲೇವಾರಿ ಮಾಡುವ ಬಗ್ಗೆ ಸೂಚನೆ ನೀಡಲಾಯಿತು .
ಸಭೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ನಿವಾಸ ಪೂಜಾರಿಯವರು,ಉಡುಪಿ ಜಿಲ್ಲೆಯ ಶಾಸಕರಾದ ಸುನೀಲ್ ಕುಮಾರ್,ಯಶ್ಪಾಲ್ ಸುವರ್ಣ,, ಗುರುರಾಜ್ ಗಂಟಿಹೊಳೆ, ಸುರೇಶ್ ಶೆಟ್ಟಿ ಗುರ್ಮೆ, ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ,ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ ಕೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

