ಕುಂದಾಪುರ :ಗಂಟು ಬೀಳು ಸರಕಾರಿ ಶಾಲೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ನಡೆಯಿತು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ ಕಿರಣ್ ಕುಮಾರ್ ಕೊಡ್ಗಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು ಸರಕಾರಿ ಶಾಲೆಗಳಲ್ಲಿಯೂ ಉತ್ತಮ ಶಿಕ್ಷಕರಿದ್ದು ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗುತ್ತದೆ ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳುವ ಮೂಲಕ ಸರಕಾರಿ ಶಾಲೆಗಳ ಉಳಿವಿಗಾಗಿ ಶ್ರಮಿಸಬೇಕು ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಲ್ಲಿ ಉತ್ತಮ ಪ್ರತಿಭೆಗಳಿದ್ದು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ತರುವ ಕೆಲಸವನ್ನು ಸರ್ಕಾರಿ ಶಿಕ್ಷಕರು ಮಾಡಬೇಕು ಎಂದರು.ವೇದಿಕೆಯಲ್ಲಿ ಕುಂದಾಪುರ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯ ಅಧಿಕಾರಿ ಅಶೋಕ್ ನಾಯ್ಕ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುಕನ್ಯ, ಬೆಳ್ವೆ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ರಾಧಾ, ನಿಕಟ ಪೂರ್ವ ಅಧ್ಯಕ್ಷ ಎಸ್ ಚಂದ್ರಶೇಖರ ಶೆಟ್ಟಿ ಸೋರ್ಗೊಳ್ಳಿ, ಸದಸ್ಯರಾದ ನಾರಾಯಣ ನಾಯ್ಕ ,ಕಲಾವತಿ, ಹಾಲಾಡಿ ವೃತ್ತ ಶಿಕ್ಷಣ ಸಂಯೋಜಕ ಶೇಖರ್ ಯು, ಕುಂದಾಪುರ ವಲಯ ಕ.ರಾ.ಪ್ರಾ.ಶಾ. ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ್ ಕುಮಾರ್ ಶೆಟ್ಟಿ ಆರ್ಡಿ, ಅಲ್ಬಾಡಿ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಅನೂಪ್ ಕುಮಾರ್ ಶೆಟ್ಟಿ, ಉದ್ಯಮಿಗಳಾದ ಬಿ ಗಣೇಶ್ ಕಿಣೆ,ಸತೀಶ್ ಕಿಣಿ ಬೆಳ್ವೆ, ಬೆಳ್ವೆ ವ್ಯವಸಾಯ ಸೇವ್ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್ ಜಯರಾಮ್ ಶೆಟ್ಟಿ, ಕೋಟೇಶ್ವರ ಗೀತಾ, ಎಚ್ ಎಸ್ ಏನ್ ಫೌಂಡೇಶನ್ ಅಧ್ಯಕ್ಷ ಶಂಕರ್ ಐತಾಳ್, ಉದ್ಯಮಿ ಮೀರಾ ಪ್ರಶಾಂತ್ ಶೆಟ್ಟಿ ಆರ್ಡಿ, ವಾರ್ಷಿಕೋತ್ಸವ ಸಮಿತಿ ಗೌರವಾಧ್ಯಕ್ಷ ನಿವೃತ್ತ ಮುಖ್ಯ ಶಿಕ್ಷಕ ಬಾಬು ಶೆಟ್ಟಿ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೃಷ್ಣ ನಾಯಕ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಶ್ವಾಸ್ ಶೆಟ್ಟಿ, ಶಾಲಾ ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಶೆಟ್ಟಿ, ವಿದ್ಯಾರ್ಥಿ ನಾಯಕಿ ಸೌಜನ್ಯ, ಶಾಲಾ ಮುಖ್ಯ ಶಿಕ್ಷಕಿ ಶಾರದ ಮುಂತಾದವರು ಉಪಸ್ಥಿತರಿದ್ದರು.