ಕುಂದಾಪುರ : ಕುಂದಾಪುರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ವಸತಿ ಯೋಜನೆಯ ಫಲಾನುಭವಿಗಳಿಗೆ ಅನುದಾನ ಬಿಡುಗಡೆಯಾಗದೆ ಮನೆ ನಿರ್ಮಾಣ ಪೂರ್ಣಗೊಳಿಸಲು ಫಲಾನುಭವಿಗಳು ಒದ್ದಾಟ ಮಾಡುತಿದ್ದು, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿಯವರು ಬೆಂಗಳೂರಿನ ಕಾವೇರಿ ಭವನದಲ್ಲಿರುವ ರಾಜೀವ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಮ್ಮ ಎನ್. ಇವರನ್ನು ಭೇಟಿ ಮಾಡಿ ವಸತಿ ಯೋಜನೆಯ ಫಲಾನುಭವಿಗಳಿಗೆ ಶೀಘ್ರವಾಗಿ ಹಂತವಾರು ಅನುದಾನ ಬಿಡುಗಡೆ ಮಾಡುವಂತೆ ವಿನಂತಿಸಿದರು.