ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧತೆ ನಡೆಸಿರುವ ಕೆ.ಎಸ್. ಈಶ್ವರಪ್ಪ ಪ್ರಧಾನಿ ಮೋದಿ ಅವರ ಫೋಟೋ ಬಳಕೆ ವಿಚಾರಕ್ಕೆ ನ್ಯಾಯಾಲಯದ ಮೆಟ್ಟಿಲು ಎರಿದ್ದಾರೆ ತಮ್ಮ ಚುನಾವಣಾ ಪ್ರಚಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಫೋಟೋ ಬಳಸಿಕೊಳ್ಳಲು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ಕೇವಿಯಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನರೇಂದ್ರ ಮೋದಿ ಅವರ ಫೋಟೋವನ್ನು ಈಶ್ವರಪ್ಪ ತಮ್ಮ ಪ್ರಚಾರದಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಇದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಸಂಬಂಧ ಸುದ್ದಿಗೋಷ್ಠಿಯೊಂದರಲ್ಲಿ ಹಾಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರತಿಕ್ರಿಯಿಸಿ, ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿಯ ಅಧಿಕೃತ ಅಭ್ಯರ್ಥಿ. ಮೋದಿ ಅವರ ಫೋಟೋ ಬಳಸಿಕೊಳ್ಳುವ ಹಕ್ಕು ಬಿಜೆಪಿಗೆ ಮಾತ್ರ ಇದೆ ಎಂದು ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ್ದ ಕೆ.ಎಸ್.ಈಶ್ವರಪ್ಪ ನಾನು ಕೂಡ ಮೋದಿ ಅವರ ಅಭಿಮಾನಿ. ನನ್ನ ಹೃದಯ ಬಗೆದರೆ ಒಂದು ಕಡೆ ಶ್ರೀರಾಮ, ಇನ್ನೊಂದೆಡೆ ಮೋದಿ ಇದ್ದಾರೆ ಎಂದರು