ಕಾರ್ಕಳ: ಮಾದ್ಯಮಗಳಲ್ಲಿ ಕಾಂಗ್ರೆಸ್ ಪಕ್ಷದ ಚೊಂಬು ಜಾಹಿರಾತಿನ ಉಲ್ಲೇಖಿಸಿ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬರುವ ಮೊದಲು ದೇಶದಲ್ಲಿ ಶೌಚಕ್ಕೆ ಚೆಂಬು ಹಿಡಿದು ಸಾಗುವ ಅನಿವಾರ್ಯತೆ ನಿರ್ಮಾಣವಾಗಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಸುಮಾರು ಲಕ್ಷಾಂತರ ಶೌಚಾಲಯಗಳನ್ನು ಕೇಂದ್ರ ಸರಕಾರ ನಿರ್ಮಾಣ ಮಾಡಿದೆ ಎಂದು ಕಾಂಗ್ರೆಸ್ ಪಕ್ಷದ ಜಾಹಿರಾತನ್ನು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ತರಾಟೆಗೆತ್ತಿಕೊಂಡರು.
ಅವರು ಕಾರ್ಕಳ ವಿಕಾಸ ಚುನಾವಣಾ ಕಚೇರಿಯಲ್ಲಿ ನಡೆದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಹುಬ್ಬಳ್ಳಿ ಯುವತಿ ಕೊಲೆ ಪ್ರಕರಣ ಕುರಿತು ಮಾತನಾಡಿದ ಕೋಟ, ರಾಜ್ಯದಲ್ಲಿ ಮತೀಯ ವಾದಿಗಳು ಸರಕಾರವನ್ನು ನಡೆಸುತ್ತಿದ್ದಾರೆಯೆ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು. ಈ ಪ್ರಕರಣದಿಂದಾಗಿ ರಾಜ್ಯದ ನಾಗರಿಕ ಸಮಾಜವೆ ತಲೆ ತಗ್ಗಿಸುವಂತಾಗಿದೆ ಎಂದರು.