181
ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಭಾರಿ ಅಂತರದಲ್ಲಿ ಗೆಲ್ಲುವ ಮೂಲಕ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿಯವರು ಗೆಲುವಿನ ನಗೆ ಬೀರಿದ್ದಾರೆ
ಕಮಲದ ಬೇರು ಜಿಲ್ಲೆಯಲ್ಲಿ ಭದ್ರವಾಗಿದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದು ವರ್ಷದ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ಐದು ಕ್ಷೇತ್ರಗಳಲ್ಲಿ ಜಯಗಳಿಸಿದ್ದ ಬಿಜೆಪಿ, ಪ್ರಸಕ್ತ ಕಾಂಗ್ರೆಸ್ ಅಭ್ಯರ್ಥಿಯಾದ ಜಯಪ್ರಕಾಶ್ ಹೆಗ್ಡೆಯವರನ್ನು 2.5 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸುವ ಮೂಲಕ ದಾಖಲೆ ನಿರ್ಮಿಸಿದೆ ಕರ್ನಾಟಕ ಕರಾವಳಿಯಲ್ಲಿ ಬಿಜೆಪಿ ಮತ್ತೋಮ್ಮೆ ಪ್ರಾಬಲ್ಯ ಮೆರೆದಿದೆ

