ಉಡುಪಿ : ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ 10 ವರ್ಷಗಳಲ್ಲಿ ನೂರಾರು ಜನಪರ ಯೋಜನೆಗಳ ಸಹಿತ 40 ಕೋಟಿ ಜನತೆಯನ್ನು ಬಡತನದ ರೇಖೆಯಿಂದ ಮೇಲೆತ್ತುವ ಜೊತೆಗೆ 70 ಕೋಟಿ ಜನತೆ ಬ್ಯಾoಕ್ ಖಾತೆಗಳನ್ನು ತೆರೆಯುವ ಮೂಲಕ ಕೇoದ್ರ ಸರಕಾರದ ಯೋಜನೆಗಳ ಫಲಗಳನ್ನು ಬ್ಯಾಂಕ್ ಖಾತೆಗಳಿಗೆ ನೇರ ವರ್ಗಾವಣೆಗೆ ಮಾಡುವ ಕ್ರಾಂತಿಕಾರಿ ಬದಲಾವಣೆಯಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದಂತಾಗಿದೆ. ಭಾರತವನ್ನು ವಿಶ್ವದ ಮುಂದುವರಿದ ದೇಶಗಳ ಯಾದಿಯಲ್ಲಿ 5ನೇ ಸ್ಥಾನಕ್ಕೆ ಕೊಂಡೊಯ್ದಿರುವ ಪ್ರಧಾನಿ ನರೇಂದ್ರ ಮೋದಿ ಮುoದಿನ 5 ವರ್ಷಗಳಲ್ಲಿ ಭಾರತವನ್ನು ವಿಶ್ವದ 3ನೇ ಅತಿ ದೊಡ್ಡ ಆರ್ಥಿಕತೆಯನ್ನಾಗಿ ಮಾಡುವ ದಿಕ್ಕಿನಲ್ಲಿ ಶ್ರಮಿಸಲಿದ್ದಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ರಾಜಕೀಯ ಜೀವನದಲ್ಲಿ ಜನಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ಜೊತೆಗೆ ಗ್ರಾಮ ಪಂಚಾಯತ್ ಮಟ್ಟದಿಂದ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಸಚಿವನಾಗಿ ಅನೇಕ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ಬ್ರಷ್ಟಾಚಾರ ರಹಿತವಾಗಿ ನಿರ್ವಹಿಸಿದ ಹಿನ್ನೆಲೆಯಲ್ಲಿ ಪ್ರಸಕ್ತ ಲೋಕ ಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿಸುವ ನಿಟ್ಟಿನಲ್ಲಿ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಅತ್ಯಧಿಕ ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಿ ಆಶೀರ್ವದಿಸಬೇಕು ಎಂದು ಕೋಟ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷರುಗಳಾದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮಟ್ಟಾರ್ ರತ್ನಾಕರ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯಕ್, ಚುನಾವಣಾ ಅಭಿಯಾನ ಪ್ರಮುಖ್ ಬೈಕಾಡಿ ಸುಪ್ರಸಾದ್ ಶೆಟ್ಟಿ, ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು ಹಾಗೂ ಪಕ್ಷದ ಮುಖಂಡರು, ಜಿಲ್ಲಾ, ಮೋರ್ಚಾ, ಪ್ರಕೋಷ್ಠ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನ ಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.