ಕೋಟೇಶ್ವರ : ಶ್ರೀ ಕಾಳವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ರ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಸೌಕೂರಿನ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನೆರವೇರಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಪಿ.ಕಿಶನ್ ಹೆಗ್ಡೆ ಇವರು ಸಮಾರೋಪ ಭಾಷಣ ಮಾಡಿದರು. ಶಿಬಿರದಲ್ಲಿ ವಿದ್ಯಾರ್ಥಿಗಳು ಕೈಗೊಂಡ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಕಲಿತ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಾರ್ಥಕ ಬದುಕು ಸಾಧ್ಯ ಎಂದರು. ವಿದ್ಯಾರ್ಥಿ ಜೀವನದ ಸಂದರ್ಭದಲ್ಲಿ ಮೌಲ್ಯಗಳನ್ನು ಕಲಿಯುವ ಮತ್ತು ಕೌಶಲ್ಯಗಳನ್ನು ಕರಗತ ಮಾಡಿಕೊಳ್ಳುವ ವಿಷಯ ಪ್ರಮುಖವಾದವು ಎಂದರು. ವಿವಿಧ ಕ್ಷೇತ್ರಗಳಲ್ಲಿ ಲಭ್ಯ ಇರುವ ಅವಕಾಶಗಳನ್ನು ತಮ್ಮ ಆಸಕ್ತಿ ಮತ್ತು ಅಭಿರುಚಿಗೆ ಅನುಗುಣವಾಗಿ ಬಳಸಿಕೊಳ್ಳುವ ಕುರಿತು ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿ ಇರಬೇಕು ಎಂದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ನಾಗರಾಜ ವೈದ್ಯ ಎಂ . ಮತ್ತು ಐಕ್ಯೂಎಸಿ ಸಂಚಾಲಕರಾದ ಶ್ರೀ ನಾಗರಾಜ ಯು., ರವಿಚಂದ್ರ ಹೆಚ್ ಎಸ್, ಸ.ಹಿ ಪ್ರಾ ಶಾಲೆ ಸೌಕೂರು ಇಲ್ಲಿನ ಮುಖ್ಯೋಪಾಧ್ಯಾಯರಾದ ನಮ್ರತಾ, ಗ್ರಾಮ ಪಂಚಾಯತ್ ಗುಲ್ವಾಡಿ ಇಲ್ಲಿನ ಸದಸ್ಯರಾದ ಸುರೇಂದ್ರ ಶೆಟ್ಟಿ ಅವರು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮರಾಯ ಆಚಾರ್ಯ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಪ್ರಭಾಕರ ಖಾರ್ವಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಎನ್ ಎಸ್ ಎಸ್ ಸಂಯೋಜನಾಧಿಕಾರಿಗಳಾದ ಶ್ರೀಮತಿ ರೋಹಿಣಿ ಮತ್ತು ಶ್ರೀ ನಿರಂಜನ ಶರ್ಮಾ ಉಪಸ್ಥಿತರಿದ್ದರು. ಎನ್ ಎಸ್ ಎಸ್ ವಿದ್ಯಾರ್ಥಿ ಪ್ರತಿನಿಧಿಗಳಾದ ಪ್ರದೀಪ್ ಹಾಗೂ ವೈಷ್ಣವಿ ಉಪಸ್ಥಿತರಿದ್ದರು. ಸ್ವಯಂ ಸೇವಕರಾದ ದಿವ್ಯ ಕಾರ್ಯಕ್ರಮ ನಿರೂಪಿಸಿದರು. ಶಿಬಿರವನ್ನು ಯಶಸ್ವಿಯಾಗಿ ನಡೆಸಲು ಸಹಕರಿಸಿದ ಸ್ಥಳೀಯರಾದ ರಂಜಿತ್, ರಾಹುಲ್, ನಾಗರಾಜ ಭಟ್ ಇವರನ್ನು ಗೌರವಿಸಲಾಯಿತು.

