Home » ಹಂಗಾರಕಟ್ಟೆ ಕಲಾಕೇಂದ್ರ ವಿದ್ಯಾರ್ಥಿಗಳ ಸಮಾವೇಶÀ
 

ಹಂಗಾರಕಟ್ಟೆ ಕಲಾಕೇಂದ್ರ ವಿದ್ಯಾರ್ಥಿಗಳ ಸಮಾವೇಶÀ

by Kundapur Xpress
Spread the love

ಕೋಟ : ಐವತ್ತು ವರ್ಷದ ಇತಿಹಾಸವಿರುವ ಗುಂಡ್ಮಿಯ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ, ಐರೋಡಿಯ ವಿದ್ಯಾರ್ಥಿಗಳ ಸಮಾವೇಶವು ಇತ್ತೀಚೆಗೆ ಕಲಾಕೇಂದ್ರದ ಸದಾನಂದ ರಂಗಮಂಟಪದಲ್ಲಿ ನಡೆಯಿತು.
ಧಾರ್ಮಿಕ ಮುಖಂಡ ಕೋಟದ ಹಲಸಿನಕಟ್ಟೆ ಅನಂತಪದ್ಮನಾಭ ಐತಾಳ ಸಮಾವೇಶವನ್ನು ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಕಲಾಕೇಂದ್ರದ ಅಧ್ಯಕ್ಷ ಆನಂದ ಸಿ ಕುಂದರ್ ವಹಿಸಿದ್ದರು. ಕಲಾಕೇಂದ್ರದ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ ಸಮಾವೇಶದ ಉದ್ದೇಶವನ್ನು ತಿಳಿಸಿರು. ವಿದ್ಯಾರ್ಥಿಗಳಿಂದ ಸಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ವಿದ್ಯಾರ್ಥಿಗಳ ವ್ಯಕ್ತಿ ಚಿತ್ರ ಪುಸ್ತಕ ನಮ್ಮವರು ಬಿಡುಗಡೆಗೊಳಿಸಿ ಮಾತನಾಡಿ ಯಕ್ಷಗಾನ ಕಲೆ ಮನೋರಂಜನೆಗೆ ಮಾತ್ರ ಸೀಮಿತವಾಗಿಲ್ಲ. ಅದು ವ್ಯಕ್ತಿಯ ಪರಿಪೂರ್ಣ ವ್ಯಕ್ತಿತ್ವ ನಿರ್ವಹಣೆ, ಬೆಳವಣಿಗೆಗೆ ಸಹಕಾರಿ ಎಂದು ಹೇಳಿದರು.
ಯಕ್ಷಗಾನ ಬದುಕಿಗೆ ಆಸರೆಯಾಗುವ ಜೊತೆಗೆ ಸಂಸ್ಕ್ರತಿಯನ್ನು ಎತ್ತಿಹಿಡಿದ ದೊಡ್ಡ ಕಲೆ. ಯಕ್ಷಗಾನ ಕಲಾಕೇಂದ್ರವನ್ನು ಹುಟ್ಟುಹಾಕಿದ, ಬೆಳವಣಿಗೆಗೆ ಕಾರಣವಾದವರನ್ನು ಅಭಿನಂದಿಸುತ್ತೇವೆ ಎಂದರು. ಸಾಹಿತಿ ಪ್ರೊ.ಉಪೇಂದ್ರ ಸೋಮಯಾಜಿ ಶಾಲೆ ಮತ್ತು ಶಿಷ್ಯರ ಸಂಬಂದದ ಬಗ್ಗೆ ವಿವರಿಸಿದರು.
ಯಕ್ಷ ಕಲಾವಿದ ಕೊಂಡದಕುಳಿ ರಾಮಚಂದ್ರ ಹೆಗಡೆ, ಮಟಪಾಡಿ ಚಂದ್ರಶೇಖರ ಕಲ್ಕೂರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಲಾಕೇಂದ್ರದ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ್ ಸ್ವಾಗತಿಸಿದರು. ಬೈಲೂರು ಸುಬ್ರಹ್ಮಣ್ಯ ಐತಾಳ್ ವಂದಿಸಿದರು. ಲಂಬೋದg ಹೆಗಡೆ ನಿರೂಪಿಸಿದರು.

   

Related Articles

error: Content is protected !!