ಕುಂದಾಪುರ : ಕರ್ನಾಟಕ ಕರಾವಳಿಯ ಅದರಲ್ಲೂ ಕುಂದಾಪ್ರ ನೆಲದ ಸಾಂಸ್ಕ್ರತಿಕ ಹಾಗೂ ಕ್ರೀಡಾ ಚಡುವಟಿಕೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಸಂಸ್ಥೆಯು ಇದೀಗ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕುಂದಾಪುರದಲ್ಲಿ ಕನ್ನಡ ಹಬ್ಬವನ್ನು ಆಚರಿಸಲು ಸಿದ್ದತೆ ನಡೆಸಿದೆ
ಕುಂದಾಪುರದಲ್ಲಿ ಸೌಹಾರ್ದತೆ ಮೂಡಿಸುವ ನೆಲೆಯಲ್ಲಿ ಇದೇ ತಿಂಗಳ 31ರಂದು ಕುಂದಾಪುರದಲ್ಲಿ ಕಲಾಕ್ಷೇತ್ರ ಸಂಸ್ಥೆಯ ನೇತೃತ್ವದಲ್ಲಿ ಉಡುಪಿ ಜಿಲ್ಲಾಡಳಿತದ ಪೂರ್ಣ ಸಹಕಾರದೊಂದಿಗೆ ಕನ್ನಡ ರಥೋತ್ಸವದ ಮೆರವಣಿಗೆ ಆಯೋಜಿಸಲಾಗಿದೆ ಎಂದು ಕುಂದಾಪುರ ಕಲಾಕ್ಷೇತ್ರ ಸಂಸ್ಥೆಯ ಅಧ್ಯಕ್ಷ ಬಿ ಕಿಶೋರ್ ಕುಮಾರ್ ಹೇಳಿದರು.
ಅವರು ಕುಂದಾಪುರದ ಕಲಾಕ್ಷೇತ್ರ ಸಂಸ್ಥೆಯ ಸಭಾಭವನ ಪ್ರಕಾಶಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಂಸ್ಥೆ ಹಮ್ಮಿಕೊಂಡಿರುವ ಕನ್ನಡ ರಥೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಅಂದು ಮಧ್ಯಾಹ್ನ 3.00ಕ್ಕೆ ಉಡುಪಿ ಜಿಲ್ಲಾಧಿಕಾರಿಯವರು ರಥೋತ್ಸವಕ್ಕೆ ಚಾಲನೆ ನೀಡುವರು ಎಂದು ಅವರು ತಿಳಿಸಿದರು.
ರಾಜೇಶ್ ಕಾವೇರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. 7 ದಿನದ ಉತ್ಸವ ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ ಚರ್ಚೆ ನಡೆಯಿತು. ಕನ್ನಡ ಉತ್ಸವ ಹಾಗೂ ಕನ್ನಡ ರಥೋತ್ಸವದ ಪೂರ್ವಭಾವಿ ಸಭೆಯಲ್ಲಿ ಕನ್ನಡ ಉತ್ಸವ ಹಾಗೂ ಕನ್ನಡ ರಥೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಪುರಸಭೆ ಉಪಾಧ್ಯಕ್ಷೆ ವನಿತಾ ಬಿಲ್ಲವ, ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಗಿರಿಜಾ ಮಾಣಿಗೋಪಾಲ್, ಪುರಸಭೆ ಸದಸ್ಯೆ ದೇವಕಿ ಪಿ.ಸಣ್ಣಯ್ಯ, ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ, ಮೂಡ್ಲಕಟ್ಟೆ ಎಂಐಜೆ ಇನ್‌ಸ್ಟಿಟ್ಯೂಟ್ ಅಧ್ಯಕ್ಷ ಸಿದ್ದಾರ್ಥ ಜೆ. ಶೆಟ್ಟಿ ಉಡುಪಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಪುರಸಭೆ ಸದಸ್ಯ ಅಬು ಮಹಮ್ಮದ್, ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಮೈಲಾರೇಶ್ವರ ಯುವಕ ಮಂಡಲದ ಅಧ್ಯಕ್ಷರಾದ ಜಿ ಪ್ರಕಾಶ್ ರಾವ್ ಸದಸ್ಯರಾದ ಡಿ ಸತೀಶ್ ಬಾಲಚಂದ್ರ ಕಂಚುಗಾರ್ ಮಹಾಕಾಳಿ ದೇವಳದ ಅಧ್ಯಕ್ಷರಾದ ಜಯಾನಂದ ಖಾರ್ವಿ ವಿಶ್ವ ರಾಮಕ್ಷತ್ರಿಯರ ಸಂಘದ ಕೋಶಾಧಿಕಾರಿಗಳಾದ ಶ್ರೀಮತಿ ರಶ್ಮೀರಾಜ್ ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಆಮಂತ್ರಣ ಪತ್ರಿಕೆಯನ್ನು ಅನಾವರಣಗೊಳಿಸಲಾಯಿತು
ಅ.21ರಂದು ಎ