Home » ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ
 

ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

ಲಗೋರಿ ಕ್ರೀಡಾಕೂಟ ಉದ್ಘಾಟನೆ

by Kundapur Xpress
Spread the love

ಕುಂದಾಪುರ : ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ವತಿಯಿಂದ, ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ನಗರದ ಬೋರ್ಡ್ ಹೈಸ್ಕೂಲಿನ ಮೈದಾನದಲ್ಲಿ ಆಯೋಜಿಸಿದ ಎರಡನೇ ವರ್ಷದ ‘ಲಗೋರಿ’ ಗ್ರಾಮೀಣ ಕ್ರೀಡಾಕೂಟವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್‌ ಉದ್ಘಾಟಿಸಿದರು

ನಾನು ಕುಂದಾಪ್ರದವ ಅನ್ನುವ ಹೆಮ್ಮೆಯಿದೆ ಒಳ್ಳೆಯ ಮನಸ್ಸಿಗರು ಇರುವ ಊರಿದು. ಕೇರಳದಲ್ಲಿ ತ್ರಿಶೂರು ಮಲಯಾಳಂಗೆ ವಿಶೇಷ ಸ್ಥಾನವಿದೆ. ಅದೇ ರೀತಿ ರಾಜ್ಯದಲ್ಲಿ ಕುಂದಾಪ್ರ ಕನ್ನಡವು ವಿಶೇಷವಾದ ಭಾಷೆಯಾಗಿ ವಿಶಿಷ್ಟ ಸ್ಥಾನ ಪಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ನುಡಿದರು

ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮಾತನಾಡಿ ಚಿಕ್ಕಂದಿನಲ್ಲಿ ಆಡುತ್ತಿದ್ದ ಲಗೋರಿ ಚಿನ್ನಿದಾಂಡು ಆಟಗಳನ್ನು ಸ್ಮರಿಸಿಕೊಂಡರು.

ಸಮಾರಂಭದಲ್ಲಿ ಕಲಾಕ್ಷೇತ್ರ – ಕುಂದಾಪುರ ಟ್ರಸ್ಟ್ ಅಧ್ಯಕ್ಷ ಕಿಶೋರ್ ಕುಮಾ‌ರ್ ಕುಂದಾಪುರ ಯುವಜನಾ ಸೇವಾ ಮತ್ತು ಕ್ರೀಡಾಧಿಕಾರಿ ಕುಸುಮಾಕರ್ ಶೆಟ್ಟಿ ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ತಾಲೂಕು ಅಧ್ಯಕ್ಷ ಡಾ| ಉಮೇಶ್‌ ಪುತ್ರನ್, ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸದಸ್ಯ ರಾಜೇಶ್  ಕೆ.ಸಿ. ಎಸ್‌ಬಿಐ ಬ್ಯಾಂಕಿನ ಕಾಳಾವರದ  ಪ್ರಾದೇಶಿಕ ಪ್ರಬಂಧಕ ಮುರಳೀಧರ್, ಬೈಂದೂರು ಕಂಬಳ ಸಮಿತಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಬೋರ್ಡ್ ಹೈಸ್ಕೂಲು ಉಪಪ್ರಾಂಶುಪಾಲ ಕಿರಣ್ ಹೆಗ್ಡೆ ದೈಹಿಕ ಶಿಕ್ಷಣ ಶಿಕ್ಷಕ ಉದಯ ಕುಮಾರ್ ಶೆಟ್ಟಿ ರಾಜೀವ ಕೋಟ್ಯಾನ್ ಮುಂತಾದವರು ಉಪಸ್ಥಿತರಿದ್ದರು.

ಟ್ರಸ್ಟ್‌ನ ರಾಜೇಶ್ ಕಾವೇರಿ ಸ್ವಾಗತಿಸಿ, ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.

 

Related Articles

error: Content is protected !!