ಕೋಟೇಶ್ವರ : ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಕುಂದಾಪುರದ ಖ್ಯಾತ ವಕೀಲರಾದ ಶ್ರೀ ಟಿ.ಬಿ. ಶೆಟ್ಟಿಯವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಸಂವಿಧಾನದ ಪೀಠಿಕೆಯ ಬಗ್ಗೆ ಸವಿಸ್ತಾರವಾಗಿ ಮಾತನಾಡಿ, ವಿದ್ಯಾರ್ಥಿಗಳು ಸಂವಿಧಾನದಲ್ಲಿ ಉಲ್ಲೇಖಿಸಿರುವ ಮೂಲಭೂತ ತತ್ವಗಳು ಮತ್ತು ಅದರ ಮೌಲ್ಯಗಳನ್ನು ಅರ್ಥೈಸಿಕೊಂಡು ನ್ಯಾಯ, ಸ್ವಾತಂತ್ರ, ಸಮಾನತೆ ಮತ್ತು ರಾಷ್ಟ್ರದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡಿ ರಾಷ್ಟ್ರಗೌರವವನ್ನು ಮೆರೆಯಬೇಕು ಎಂದು ವಿದ್ಯಾರ್ಥಿಗಳಿಗೆ ಕರೆಕೊಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್ ನಾಯಕ ಇವರು ಅಧ್ಯಕ್ಷತೆ ವಹಿಸಿದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಗಳನ್ನು ಓದುವುದರ ಮೂಲಕ ಉತ್ತಮ ಜವಾಬ್ದರಿಯುತ ನಾಗರಿಕನಾಗಬೇಕು ಮತ್ತು ಹಕ್ಕು-ಕರ್ತವ್ಯಗಳ ಬಗ್ಗೆ ಅರಿತುಕೊಂಡಿರಬೇಕು ಎಂದು ಈ ಸಂದರ್ಭದಲ್ಲಿ ನುಡಿದರು.
ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ಶ್ರೀ ನಾಗರಾಜ ಯು. ಇವರು ಮಾತನಾಡಿ ಜಗತ್ತಿನ ಉತ್ಕøಷ್ಠ ಗ್ರಂಥಗಳಲ್ಲಿ ಭಾರತದ ಸಂವಿಧಾನವೂ ಒಂದು, ಇದನ್ನು ಪ್ರತಿಯೋರ್ವರೂ ಓದಿ ಅಥೈಸಿಕೊಂಡು ಜೀವನಾಡಿಯಾಗಿಸಿಕೊಳ್ಳಬೇಕೆಂದು ಎಂದು ಹೇಳಿದರು.
ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ನಾಗರಾಜ ವೈದ್ಯ ಎಂ., ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ಶೇಖರ ಬಿ. ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥರಾದ ಶ್ರೀ ಗಣೇಶ್ ಪೈ ಎಂ., ಡಾ. ವೆಂಕಟರಾಮ ಭಟ್, ವಾಣಿಜ್ಯ ಶಾಸ್ತ್ರ ವಿಭಾಗ, ಶ್ರೀ ರವಿಚಂದ್ರ ಹೆಚ್. ಎಸ್ ಗ್ರಂಥಪಾಲಕರು ಹಾಗೂ 825 ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಚುನಾವಣಾ ಸಾಕ್ಷರತಾ ಸಂಘದ ಸಂಚಾಲಕರು ಹಾಗೂ ರಾಜ್ಯಶಾಸ್ತ್ರ ಮುಖ್ಯಸ್ಥರಾದ ಡಾ. ಭಾಗೀರಥಿ ನಾಯ್ಕ ಇವರು ಸ್ವಾಗತಿಸಿದರು ಕು. ಸ್ವರೂಪ ಇವರು ಸಂವಿಧಾನದ ಪೀಠಿಕೆ ಪ್ರತಿಜ್ಞಾವಿಧಿಯನ್ನು ಓದಿದರು, ಕು. ಪವಿತ್ರಾ ಮರಾಠಿ ಇವರು ನಿರೂಪಣೆ ಮಾಡಿದರು ಹಾಗೂ ಕು. ತಿಲಕ ಇವರು ವಂದಿಸಿದರು