Home » ಕೋಟ – ಕಲ್ಲಟ್ಟು ದೇಗುಲದ ವರ್ಧಂತಿ ಉತ್ಸವ
 

ಕೋಟ – ಕಲ್ಲಟ್ಟು ದೇಗುಲದ ವರ್ಧಂತಿ ಉತ್ಸವ

ಕೋಟದ ಪಂಚವರ್ಣ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

by Kundapur Xpress
Spread the love

ಕೋಟ : ಇಲ್ಲಿನ ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ ವರ್ಧಂತಿ ಉತ್ಸವದ ಅಂಗವಾಗಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಸ್ಥಳೀಯ ಸಂಘಸಂಸ್ಥೆಗಳ ಸಹಯೋಗದೊಂದಿಗೆ 243 ನೇ ಭಾನುವಾರ ಪರಿಸರಸ್ನೇಹಿ ಕಾರ್ಯಕ್ರಮದ ಪ್ರಯುಕ್ತ ದೇಗುಲವನ್ನು ಸ್ವಚ್ಛಗೊಳಿಸುವ ಕಾರ್ಯಕ್ರಮ ಹಮ್ಮಿಕೊಂಡಿತು.
ಈ ಕಾರ್ಯದ ಹಿನ್ನಲ್ಲೆಯಲ್ಲಿ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ಹಾಗೂ ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಇವರುಗಳನ್ನು ಶಾಲು ಹೋದಿಸಿ ಗೌರವಿಸಿತು.ದೇಗುಲದ ಆಡಳಿತ ಮಂಡಳಿಯ ಕಾರ್ಯದರ್ಶಿ ಹರೀಷ್ ದೇವಾಡಿಗ, ಪಂಚವರ್ಣದ ಉಪಾಧ್ಯಕ್ಷ ದಿನೇಶ್ ಆಚಾರ್,ಸಂತೋಷ್ ಪೂಜಾರಿ,ಸಂಚಾಲಕ ಅಮೃತ್ ಜೋಗಿ,ಕಾರ್ಯಾಧ್ಯಕ್ಷ ಶಶಿಧರ ತಿಂಗಳಾಯ,ಪAಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ,ಜೆಸಿಐ ಕೋಟ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್,ಗ್ರಾಮದ ಗಣ್ಯರಾದ ತಿಮ್ಮ ಕಾಂಚನ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು

 

Related Articles

error: Content is protected !!