ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಹಾಗೂ ಉಡುಪಿ ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘ (ರಿ.), ಹಾಲುಮತ ಮಹಾ ಸಭಾ (ರಿ.), ಉದುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ನಿನ್ನೆ ಅಜ್ಜರಕಾಡು ಗೋವಿಂದ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ “ಕನಕದಾಸ ಜಯಂತಿ – 2023” ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು
ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ್ ಸುವರ್ಣ, ಉಡುಪಿ ಜಿಲ್ಲಾ ಕನಕದಾಸ ಸಮಾಜ ಸಂಘ (ರಿ.) ಅಧ್ಯಕ್ಷರಾದ ಹನುಮಂತ ಡೊಳ್ಳಿನ, ಉಡುಪಿ ಜಿಲ್ಲಾ ಹಾಲುಮತ ಮಹಾ ಸಭಾ (ರಿ.) ಅಧ್ಯಕ್ಷರಾದ ಸಿದ್ಧಪ್ಪ ಹೆಚ್ ಐಹೊಳೆ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾll ಅರುಣ್ ಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಉಪಸ್ಥಿತರಿದ್ದರು