Home » ಮತ್ಸ್ಯ ಸಂಪದ ಯೋಜನೆಯಡಿ ಹಲವು ಸೌಲಭ್ಯ
 

ಮತ್ಸ್ಯ ಸಂಪದ ಯೋಜನೆಯಡಿ ಹಲವು ಸೌಲಭ್ಯ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

by Kundapur Xpress
Spread the love

ಉಡುಪಿ : ಕಾಪು ತಾಲೂಕು ಆಫೀಸ್ ಬಳಿಯ ಮತ್ಸ್ಯಸೌಧ ಕಟ್ಟಡದಲ್ಲಿ ನೂತನವಾಗಿ ಪ್ರಾರಂಭಗೊಂಡಿರುವ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ನ ಕಾಪು ಶಾಖೆಯ ನೂತನ ಬ್ಯಾಂಕಿಂಗ್ ವಿಭಾಗ ಮತ್ತು ಮತ್ತೆ ಕ್ಯಾಂಟೀನ್ ನನ್ನು ಶನಿವಾರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, 2014 ರ ನಂತರ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮೀನುಗಾರಿಕೆಗೆ ವಿಶೇಷ ಅನುದಾನವನ್ನು ನೀಡಲಾಗಿದೆ. ಪ್ರತ್ಯೇಕ ಮೀನುಗಾರಿಕಾ ಸಚಿವಾಲಯವನ್ನು ಸ್ಥಾಪಿಸಿ ಮೀನುಗಾರಿಕೆ ವಿಶೇಷ ಪ್ರೋತ್ಸಾಹ ನೀಡುತ್ತಿದೆ. 26 ಸಾವಿರ ಕೋಟಿ ರೂ. ಮತ್ಸ್ಯ ಸಂಪದ ಯೋಜನೆ ಹಾಗೂ 33 ಸಾವಿರ ಕೋಟಿ ರೂ ಆಹಾರ ಸಂಸ್ಕರಣೆ ಉದ್ಯಮಗಳ ಸ್ಥಾಪನೆಗೆ ಮೀಸಲಿಟ್ಟಿದೆ ಎಂದು ತಿಳಿಸಿದರು

ಮತ್ಸ್ಯ ಸಂಪದ ಯೋಜನೆಯಡಿ ಸಾಲ ಸೌಲಭ್ಯ, ಮಹಿಳೆಯರಿಗೆ ವಿಶೇಷ ಸಹಾಯಧನ ಕೊಡುವುದರೊಂದಿಗೆ ಸ್ವಯಂ ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಕೇಂದ್ರ ಸರಕಾರವು ತೀರ್ಮಾನಿಸಿದೆ. ಮತ್ಸ್ಯ ಸಂಪದ ಯೋಜನೆಯಡಿ ಸ್ವಸಹಾಯ ಸಂಘ, ಸಣ್ಣ ಪುಟ್ಟ ವ್ಯಾಪಾರಸ್ಥರ ಮೂಲಕ ಮತ್ಸ್ಯ ಕ್ಯಾಂಟೀನ್ ತೆರೆದು ಕಡಿಮೆ ದರದಲ್ಲಿ ತಾಜಾ ಮೀನಿನ ಊಟವನ್ನು ಒದಗಿಸಲು ಯೋಜನೆ ರೂಪಿಸಲಾಗಿದೆ ಎಂದರು

ದ.ಕ. ಮೊಗವೀರ ಮಹಾಜನ ಸಂಘ ಉಚ್ಚಿಲ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ಕಾಪು ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಕಟಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ವಿಜಯ್‌ ಕುಮಾರ್‌ ಉದ್ಯಾವರ, ಇನ್ನಂಜೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ರಾಜೇಶ್‌ ರಾವ್ ಪಾಂಗಾಳ, ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪ್ರಸಾದ್‌ ಶೆಟ್ಟಿ ಕುತ್ಯಾರು, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ವೈ ಸುಧೀರ್ ಕುಮಾರ್, ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಸಾದ್ ಗೋಕುಲ್‌ ದಾಸ್ ಶೆಣೈ, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಪೊಲಿಪು ಮೊಗವೀರ ಮಹಾಸಭಾ ಅಧ್ಯಕ್ಷ ಶ್ರೀಧರ ಕಾಂಚನ್, ಉದ್ಯಮಿ ದಯಾನಂದ ಕೆ. ಸುವರ್ಣ, ಫೆಡರೇಷನ್ ವ್ಯವಸ್ಥಾಪಕ ನಿರ್ದೇಶಕಿ ದರ್ಶನ ಉಪಸ್ಥಿತರಿದ್ದರು

   

Related Articles

error: Content is protected !!