ಬಿಜೆಪಿ ಕಾಪು ಮಂಡಲದ ವತಿಯಿಂದ ಕಾಪು ಶ್ರೀ ವೀರಭದ್ರ ಸಭಾ ಭವನದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಯೋಗ ಶಿಕ್ಷಕಿ ಸುಮಿತ್ರಾ ಅವರು ಯೋಗ ಅಭ್ಯಾಸ ತರಗತಿಯನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ಅರುಣ್ ಶೆಟ್ಟಿ ಪಾದೂರು, ಕಾಪು ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಗುರುರಾಜ್, ರೈತ ಮೋರ್ಚಾ ಅಧ್ಯಕ್ಷ ಕೃಷ್ಣ ರಾವ್, ಪ್ರಮುಖರಾದ ರಾಜೇಶ್ ಕುಂದರ್, ಶಶಿಪ್ರಭಾ, ಕೇಸರಿ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು ಉಪಸ್ಥಿತರಿದ್ದರು.