ಕಾಪು : ಮಂಡಲ ಬಿಜೆಪಿ ಯುವ ಮೋರ್ಚಾದ ವತಿಯಿಂದ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆದ ಸಂಘಟನಾತ್ಮಕ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಶಾಸಕರು ಮಾತನಾಡಿ ಮುಂಬರುವ ದಿನಗಳಲ್ಲಿ ಯುವಕರು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಹಾಗೂ ಅವಕಾಶ ಕಲ್ಪಿಸುವಲ್ಲಿ ಭಾರತೀಯ ಜನತಾ ಪಾರ್ಟಿ ಬದ್ಧವಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಪ್ರಥ್ವಿರಾಜ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶರಣ್ ಕುಮಾರ್ ಮಟ್ಟು, ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಅಭಿರಾಜ್ ಸುವರ್ಣ, ಶಶಾಂಕ್ ಶಿವತ್ತಾಯ, ಉಪಾಧ್ಯಕ್ಷರಾದ ಸಚಿನ್ ಸುವರ್ಣ, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ರಂಜಿತ್ ಮಟ್ಟಾರು, ಕಾರ್ಯದರ್ಶಿಗಳಾದ ಅಶ್ವಿನ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

