ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಯ್ಕರ ತೋಟಕ್ಕೆ ಹೋಗುವ ರಸ್ತೆ ಅಭಿವೃದ್ಧಿಗೆ 13 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.ಸುಮಾರು 40 ವರ್ಷಗಳ ಬೇಡಿಕೆಯ ರಸ್ತೆಗೆ ಅನುದಾನ ಒದಗಿಸಿಕೊಟ್ಟ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ನಾಯ್ಕರ ತೋಟ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುಭಾಸ್ ಬಲ್ಲಾಳ್, ಕವಿತಾ ಸುವರ್ಣ, ಪವಿತ್ರಾ ಶೆಟ್ಟಿ, ಸವಿತಾ ಅಶೋಕ್ ಶೆಟ್ಟಿ, ಅಶೋಕ್ ರಾವ್, ಜೋಸೆಫ್ ಮೊಂಥೇರೋ, ಸುಜಲಾ ಪೂಜಾರಿ, ಕುರ್ಕಾಲು ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ನಾಗೇಶ್, ಕಾಪು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ದಿಲೀಪ್ ಕುಮಾರ್, ಸ್ಥಳ ದಾನಿಗಳಾದ ಜಯ ಶೆಟ್ಟಿ, ಕಟಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸತೀಶ್ ಹಾಗೂ ಗುತ್ತಿಗೆದಾರರು ಮತ್ತು ನಾಯ್ಕರ ತೋಟ ಗ್ರಾಮಸ್ಥರು ಉಪಸ್ಥಿತರಿದ್ದರು.