ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಉಡುಪಿ ಪಶು ಚಿಕಿತ್ಸಾಲಯ, ಉದ್ಯಾವರ ಇವರ ವತಿಯಿಂದ ದಿನಾಂಕ 11-01-2025 ರಂದು ಉದ್ಯಾವರ ಶಂಭುಕಲ್ಲು ಲಯನ್ಸ್ ಸಭಾಭವನದಲ್ಲಿ ಆಯೋಜಿಸಲಾದ “2024-25ನೇ ಸಾಲಿನ ವಿಸ್ತರಣಾ ಘಟಕ ಬಲಪಡಿಸುವಿಕೆ ಕಾರ್ಯಕ್ರಮದಡಿ ಜಾನುವಾರುಗಳ ನಿರ್ವಹಣೆ ಮತ್ತು ರೋಗಗಳ ಬಗ್ಗೆ ಜಾನುವಾರು ಜಾಗೃತಿ ಶಿಬಿರ”ವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಜೇಶ್ ಕುಂದರ್, ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರಾದ ಜಿತೇಂದ್ರ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಗಿರೀಶ್ ಕುಮಾರ್, ಉಡುಪಿ ಭೂ ನ್ಯಾಯ ಮಂಡಳಿ ಸದಸ್ಯರಾದ ರಾಯ್ಸ್ ಫರ್ನಾಂಡಿಸ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಎಂ.ಸಿ ರೆಡ್ಡಪ್ಪ, ಮಂಗಳೂರು ಪ್ರಾದೇಶಿಕ ಸಂಶೋಧನಾಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ ಹಾಗೂ ಡಾ. ಅರುಣ್, ಡಾ. ಸಂದೀಪ್ ಹಾಗೂ ಗಣ್ಯರು ಉಪಸ್ಥಿತರಿದ್ದರು.