Home » ಕಾಪು ತಾಲೂಕು ಅಕ್ರಮ – ಸಕ್ರಮ ಸಮಿತಿ ಸಭೆ
 

ಕಾಪು ತಾಲೂಕು ಅಕ್ರಮ – ಸಕ್ರಮ ಸಮಿತಿ ಸಭೆ

by Kundapur Xpress
Spread the love

ಕಾಪು :  ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಕಾಪು ತಹಸೀಲ್ದಾರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನಮೋನೆ 57 ಅಡಿಯಲ್ಲಿ ಸಲ್ಲಿಸಿದ 10 ಕಡತಗಳಿಗೆ ಮಂಜೂರಾತಿ ನೀಡಲಾಯಿತು.

ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿಗಳು ಕಾಪು ತಹಶೀಲ್ದಾರರಾದ ಪ್ರತೀಭಾ, ಅಕ್ರಮ ಸಕ್ರಮ ಸಮಿತಿ ಸದಸ್ಯರುಗಳಾದ ದಿನೇಶ್ ಕೋಟ್ಯಾನ್, ಆನಂದ ಕೊರಂಗ್ರಪಾಡಿ, ಮಾರ್ಗರೇಟ್ ಸೀಮಾ ಡಿಸೋಜಾ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

 

Related Articles

error: Content is protected !!