ಕೋಟ : ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‍ನಲ್ಲಿ ಡಾ|| ಶಿವರಾಮ ಕಾರಂತ ಅನೌಪಚಾರಿಕ ಕೇಂದ್ರ ಕೋಟ ಇದರ ಅಡಿಯಲ್ಲಿ ನಡೆಯುವ ಚಿತ್ರಕಲಾ, ಯಕ್ಷಗಾನ ನೃತ್ಯ ತರಗತಿಯ ಶೈಕ್ಷಣಿಕ ವರ್ಷದ ಆರಂಭೋತ್ಸವನ್ನು ಡಾ|| ಶಿವರಾಮ ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಬ್ರಾಯ್ ಆಚಾರ್ಯ ಉದ್ಘಾಟಿಸಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಇಂತಹ ತರಗತಿ ಉಪಯುಕ್ತವಾಗಿದ್ದು, ಚಿಕ್ಕ ವಯಸ್ಸಿನಲ್ಲಿ ಇಂತಹ ತರಗತಿಗಳಲ್ಲಿ ಭಾಗವಹಿಸುವುದಕ್ಕೆ ಪೋಷಕರು ಪ್ರೋತ್ಸಾಹಿಸಬೇಕು ಎಂದರು. ಈ ಸಂದರ್ಭದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಕ್ರಿಯೇಟಿವ್ ಆರ್ಟ್‍ನ ಚಿತ್ರಕಲಾ ಶಿಕ್ಷಕ ಗಿರೀಶ್ ಆಚಾರ್ಯ ವಕ್ವಾಡಿ, ಯಕ್ಷಗಾನ ನೃತ್ಯ ಶಿಕ್ಷಕಿ ಕುಮಾರಿ ಸಂಗೀತ ಕಾರ್ತಟ್ಟು ಉಪಸ್ಥಿತರಿದ್ದರು.