ಕುಂದಾಪುರ : ಶಿವಮೊಗ್ಗದ ಉಪನಿರ್ದೇಶಕರ ಕಾರ್ಯಾಲಯ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ 2023-24ನೇ ಸಾಲಿನ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕುಂದಾಪುರದ ಕೋಡಿಯ ಶ್ರೀರಾಮ್ ನಗರದಲ್ಲಿರುವ ಶ್ರೀರಾಮ ವಿದ್ಯಾಕೇಂದ್ರದ ಎಸ್.ಆರ್.ವಿ.ಕೆ. ಆಂಗ್ಲ ಮಾಧ್ಯಮ ಶಾಲೆ (S.R.V.K English Medium School) 9ನೇ ತರಗತಿಯ ವಿದ್ಯಾರ್ಥಿನಿ ಸಿಂಚನ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ ಇವಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಪ್ರಾಂಶುಪಾಲರು ಭೋದಕ ಹಾಗೂ ಭೋದಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ