122
ಉಡುಪಿ : ನವದೆಹಲಿಯ ಕೃಷಿ ಭವನ ದಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಮಂತ್ರಿ ಶ್ರೀ ಶಿವರಾಜ್ ಸಿಂಗ್ ಚೌಹಾನ್ ಚೌಹಾಣ್ ಭೇಟಿಯಾಗಿ ರಾಜ್ಯದ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕರಾವಳಿಯ ಸಂಸದರು ಮನವಿ ಮಾಡಿದರು.
ಅಡಿಕೆ ಬೆಳೆಗಾರರ ಸಮಾವೇಶಕ್ಕೆ ಡಿಸೆಂಬರ್ 6 ರಂದು ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ ಬರುವುದಾಗಿ ಕೇಂದ್ರ ಸಚಿವರು ತಿಳಿಸಿ ಅಡಿಕೆ ಬೆಳೆಗಾರರ ನೆರವಿಗೆ ಬರಲು ಕೇಂದ್ರ ಸರಕಾರ ಭದ್ಧವಾಗಿದೆ ಎಂದರು ಎಂದು ಸಂಸದರು ತಿಳಿಸಿದ್ದಾರೆ
ನಿಯೋಗದ ನೇತೃತ್ವವನ್ನು ಶಿವಮೊಗ್ಗ ಸಂಸದ ಶ್ರೀ ರಾಘವೇಂದ್ರ ವಹಿಸಿದ್ದು ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿ, ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ , ಬ್ರಿಜೇಶ್ ಚೌಟ ಹಿರಿಯರಾದ ಹೊಸಬಾಲೆ ಮಂಜಪ್ಪ ಮುಂತಾದವರಿದ್ದರು.

