Home » ಕಟಪಾಡಿ ಜಂಕ್ಷನ್ ಬಳಿ ಓವರ್ ಪಾಸ್ ನಿರ್ಮಾಣ : ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ
 

ಕಟಪಾಡಿ ಜಂಕ್ಷನ್ ಬಳಿ ಓವರ್ ಪಾಸ್ ನಿರ್ಮಾಣ : ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

by Kundapur Xpress
Spread the love

ಕಟಪಾಡಿ : ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ಬಳಿ ವಾಹನ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ “ಓವರ್ ಪಾಸ್” ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಈ ಸಂಬಂಧ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಹಾಗೂ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿಗಳೊಂದಿಗೆ ಕಟಪಾಡಿ ಜಂಕ್ಷನ್ ಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಿದರು.

ಈಗಾಗಲೇ ಉಡುಪಿಯ ಕಲ್ಯಾಣಪುರ ಸಂತೆಕಟ್ಟೆ ಬಳಿ ಓವರ್ ಪಾಸ್ ಕಾಮಗಾರಿ ಹಾಗೂ ಅಂಬಲಪಾಡಿ ಜಂಕ್ಷನ್ ಬಳಿ ಅಂಡರ್ ಪಾಸ್ ಕಾಮಗಾರಿ ಪ್ರಗತಿಯಲ್ಲಿ ಇರುವುದರಿಂದ ಜೊತೆಗೆ ಮಳೆಗಾಲ ಸಮೀಪಿಸುತ್ತಿರುವುದರಿಂದ ಮುಂದಿನ ಅಕ್ಟೋಬರ್ ತಿಂಗಳಿನಲ್ಲಿ ಕಟಪಾಡಿಯ ಓವರ್ ಪಾಸ್ ಕಾಮಗಾರಿ ಆರಂಭಿಸುವುದಾಗಿ ಸಂಸದರು ಹಾಗೂ ಶಾಸಕರು ತಿಳಿಸಿದರು.

ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾ ಶೆಟ್ಟಿ, ಉಪಾಧ್ಯಕ್ಷರಾದ ಸುಗುಣಾ ಪೂಜಾರ್ತಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಜಿ ಸುವರ್ಣ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಾದ ಮಲ್ಲಿಕಾರ್ಜುನ, ನವೀನ್, ಕಟಪಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಇನಾಯತ್ ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.

 

Related Articles

error: Content is protected !!