Home » ಜನ ವಿರೋಧಿ ನೀತಿ ಖಂಡಿಸಿ ಸಭೆ
 

ಜನ ವಿರೋಧಿ ನೀತಿ ಖಂಡಿಸಿ ಸಭೆ

by Kundapur Xpress
Spread the love

ಉಡುಪಿ : ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಕಟ್ಟಡ ಸಾಮಾಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರ ಸಂಘಟನೆಗಳ ಒಕ್ಕೂಟ ಉಡುಪಿ ಜಿಲ್ಲೆ, ಕಟ್ಟಡ ಕಾರ್ಮಿಕರ ಸಂಘ, ಉಡುಪಿ ಇವರ ನೇತೃತ್ವದಲ್ಲಿ  ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಶೆಟ್ಟಿ ಅವರು ಭಾಗವಹಿಸಿದರು.

ರಾಜ್ಯ ಸರ್ಕಾರವು ಕಟ್ಟಡ ಸಾಮಾಗ್ರಿಗಳಿಗೆ ಸಂಬಂಧಪಟ್ಟಂತೆ ಗೂಡ್ಸ್ ವಾಹನಗಳಿಗೆ ಲೈಫ್ ಟ್ಯಾಕ್ಸ್, ಜಿ.ಪಿ.ಎಸ್ ಅಳವಡಿಕೆ ಹಾಗೂ ಕಟ್ಟಡ ಸಾಮಾಗ್ರಿ ಸಾಗಾಟ ಮಾಡುವ ವಾಹನಗಳಿಗೆ ಏಕಾಏಕಿಯಾಗಿ ಪರವಾನಿಗೆಯನ್ನು ಕಡ್ಡಾಯಗೊಳಿಸಿದ್ದು ಈ ವ್ಯವಸ್ಥೆಯಲ್ಲಿ ದುಡಿಯುತ್ತಿರುವವರು ಸಂಕಷ್ಟಕ್ಕೆ ಒಳಗಾಗುವುದರಿಂದ ರಾಜ್ಯ ಸರ್ಕಾರ ತಕ್ಷಣದಲ್ಲಿ ಈ ನೀತಿಯನ್ನು ಹಿಂಪಡೆಯುವಂತೆ ಒತ್ತಾಯಿಸುವ ಕುರಿತು ಚರ್ಚಿಸಲಾಯಿತು.

   

Related Articles

error: Content is protected !!