ಕುಂದಾಪುರ : ಕುಂದಾಪುರದ ಕಾವ್ರಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪಕ್ರಿಯೆಯು ಸಂಘದ ಪ್ರಧಾನ ಕಛೇರಿಯಲ್ಲಿ ನಡೆಯಿತು.
ಕಾವ್ರಾಡಿ ಸಹಕಾರಿ ವ್ಯವಸಾಯಿಕ ಸಂಘದ ನೂತನ ಅಧ್ಯಕ್ಷರಾಗಿ ಸದಾನಂದ ಬಳ್ಕೂರು ಹಾಗೂ ಉಪಾಧ್ಯಕ್ಷರಾಗಿ ಭಾಸ್ಕರ್ ಶೆಟ್ಟಿ ಆಯ್ಕೆಯಾದರು ಆಡಳಿತ ಮಂಡಳಿಗೆ 13 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿತ್ತು. ಆರು ಸ್ಥಾನಗಳನ್ನು ಕಾಂಗ್ರೆಸ್, ಏಳು ಸ್ಥಾನಗಳು ಬಿಜೆಪಿ ಬೆಂಬಲಿತರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಆಯ್ಕೆಯಾದ ಅಧ್ಯಕ್ಷರಿಗೂ ಉಪಾಧ್ಯಕ್ಷರಿಗೂ ಮತ್ತು ಸದಸ್ಯರಿಗೆ ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ ಯವರು ಆಭಿನಂದನೆ ಸಲ್ಲಿಸಿದ್ದಾರೆ