ಉಡುಪಿ :ಉಡುಪಿ ಜಿಲ್ಲೆಯ ಅಭಿವೃದ್ಧಿಯ ವಿಷಯದಲ್ಲಿ ಅಧಿಕಾರಿಗಳ ವಿಳಂಬ ಧೋರಣೆಯನ್ನು ಸಹಿಸುವುದಿಲ್ಲ ಅಂತಹ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ
ಅವರು ಶುಕ್ರವಾರ ಮಣಿಪಾಲ ರಜತಾದಿಯ ಜಿಲ್ಲಾ ಪಂಚಾಯತ್ ನ ಡಾ.ವಿ ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು
ಬೈಂದೂರು ತಾಲೂಕಿನ ಗಂಗೊಳ್ಳಿ ಮೀನುಗಾರಿಕೆ ಬಂದರಿನ ಮರು ನಿರ್ಮಾಣ ಮರವಂತೆಯ ಹೊರಬಂದರು ಹಾಗೂ ಕೋಡಿ ಜಟ್ಟಿಯ ಅಳಿವೆಯಲ್ಲಿ ಹೂಳೆತ್ತುವುದಕ್ಕೆ ತಾಂತ್ರಿಕ ಸಮಸ್ಯೆಗಳ ನೆಪ ಹೇಳಿ ವಿಳಂಬ ಮಾಡುತ್ತಿರುವ ಅಧಿಕಾರಿಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸಚಿವೆ ಬಂದರು ಇಲಾಖೆ ಹಾಗೂ ಸಿ ಆರ್ ಝಡ್ ಸಮನ್ವಯದಿಂದ ತಾಂತ್ರಿಕ ಸಮಸ್ಯೆ ಬಗೆಹರಿಸಿಕೊಳ್ಳಿ ತ್ವರಿತವಾಗಿ ಗುಣಮಟ್ಟದ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ಎಂದು ಅವರು ಸೂಚನೆ ನೀಡಿದರು ಜಿಲ್ಲೆಯಲ್ಲಿ ಈ ಬಾರಿ ಭತ್ತದ ಇಳುವರಿ ಶೇಕಡ 50 ರಷ್ಟು ಕಡಿಮೆಯಾಗಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವೆ ತಾಲೂಕುವಾರು ವಿವರವನ್ನು ಸಂಗ್ರಹಿಸಿ ಸಲ್ಲಿಸುವಂತೆ ಸೂಚಿಸಿದರು
ಸಭೆಯಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ ವಿ ಸುನಿಲ್ ಕುಮಾರ್ ಗುರುರಾಜ್ ಗಂಟಿಹೊಳಿ ಕಿರಣ್ ಕುಮಾರ್ ಕೊಡ್ಗಿ ಗುರ್ಮೆ ಸುರೇಶ್ ಶೆಟ್ಟಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಜಿಲ್ಲಾಧಿಕಾರಿಗಳಾದ ಡಾ ಕೆ ವಿದ್ಯಾಕುಮಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಆಪರ ಜಿಲ್ಲಾಧಿಕಾರಿ ಮಮತ ದೇವಿ ಸೇರಿದಂತೆ ರಾಜ್ಯಮಟ್ಟದ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು