ಕಾಪು : ಕಾಪು ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ಇಂದು ದಿನಾಂಕ 04-09-2024 ರಂದು ಕಾಪು ಪುರಸಭೆಯ ಸಭಾಂಗಣದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಈ ಭಾರಿ ಸುರಿದ ಮಳೆಯಿಂದ ಹಾನಿಗೀಡಾದ ಕೃಷಿ ಬೆಳೆಗಳಿಗೆ ಹೆಕ್ಟೇರ್ ವಾರು ಪರಿಹಾರವನ್ನು ನೀಡಿದ ವರದಿಯನ್ನು ನೀಡುವಂತೆ ಮತ್ತು ರೈತರಿಗೆ ಕೃಷಿ ಇಲಾಖೆಯಿಂದ ಸಬ್ಸಿಡಿ ದರದಲ್ಲಿ ಪೂರೈಕೆಯಾಗುವಂತ ಸಲಕರಣೆಗಳ ಮಾಹಿತಿಯನ್ನು ಪಂಚಾಯತ್ ಮಟ್ಟದಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ಅರ್ಹ ಫಲಾನುಭವಿಗಳಿಗೆ ಕೃಷಿ ಇಲಾಖೆಯ ಬೇಡಿಕೆ ಆಧಾರಿತ ಸಲಕರಣೆಗಳನ್ನು ಒದಗಿಸಲು ಕ್ರಮ ವಹಿಸುವಂತೆ ಎಪ್ರಿಲ್, ಮೇ ಹಾಗೂ ಜೂನ್ ಮಾಹೆಯಲ್ಲಿ ಜಲಾಯನ ಅಭಿವೃದ್ಧಿ ಕಾರ್ಯಕ್ರಮಗಳು ಗುರಿಗಳು ಶೂನ್ಯವಾಗಿದ್ದು, ನೀರು ಸಂಗ್ರಹಣ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತನ್ನು ನೀಡಲು ಕ್ರಮ ವಹಿಸುವಂತೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ತೋಟಗಾರಿಕಾ ಇಲಾಖೆಯಲ್ಲಿ ಕೈಗೆತ್ತಿಕೊಳ್ಳಬಹುದಾದ ಕಾಮಗಾರಿಗಳನ್ನು ಗ್ರಾಮ ಪಂಚಾಯತ್ ಗಳ ಮಟ್ಟದಲ್ಲಿ ಬೇಡಿಕೆಗೆ ಅನುಗುಣವಾಗಿ ಕ್ರಿಯಾ ಯೋಜನೆಯನ್ನು ತಯಾರಿಸಿ ಅನುಷ್ಠಾನಗೊಳಿಸಲು ಕ್ರಮ ವಹಿಸುವಂತೆ ಮೀನುಗಾರ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯದ ಯೋಜನೆಯ ಬಗ್ಗೆ ವಿವರಣೆ ನೀಡುವಂತೆ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರ ಕೊರತೆಗಳು ಉಂಟಾದಲ್ಲಿ ಅತಿಥಿ ಶಿಕ್ಷಕರನ್ನು ನೇಮಕಾತಿಗೊಳಿಸುವ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಮಳೆಗಾಲದಲ್ಲಿ ಡೆಂಗ್ಯೂ ಜ್ವರ ವ್ಯಾಪಕವಾಗಿ ಹರಡುತ್ತಿದ್ದು,ಈ ಬಗ್ಗೆ ನಿಗಾವಹಿಸಿ ತುರ್ತು ಕ್ರಮದ ಬಗ್ಗೆ ಹಾಗೂ ಡೆಂಗ್ಯೂ ಜ್ವರವನ್ನು ಹರಡದ ಹಾಗೆ ತಡೆಗಟ್ಟುವಿಕೆಯ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಸಾರ್ವಜನಿಕ ತಾಲೂಕು ಆಸ್ಪತ್ರೆ ನಿರ್ಮಾಣದ ಬಗ್ಗೆ ಅಗತ್ಯ ನಿವೇಶನ ಗುರುತಿಸುವ ಬಗ್ಗೆ ಹಾಗೂ ಅಗತ್ಯ ಪ್ರಸ್ತಾವನೆಯನ್ನು ಮೇಲಾಧಿಕಾರಿಗಳಿಂದ ಸರಕಾರಕ್ಕೆ ಸಲ್ಲಿಸುವಲ್ಲಿ ಕ್ರಮ ವಹಿಸುವಂತೆ ಜೊತೆಗೆ ಕೊರಗ ಸಮುದಾಯದ ಶೈಕ್ಷಣಿಕ, ಆರೋಗ್ಯ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಗ್ರಾಮೀಣ ವಸತಿ ಯೋಜನೆಗಳಲ್ಲಿ ಈಗಾಗಲೇ ಹಂತವಾರು ಪ್ರಗತಿಯ ಜಿ.ಪಿ.ಎಸ್ ಮಾಡಿದ್ದಲ್ಲಿ ಬಾಕಿ ಸಹಾಯಧನವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಕ್ರಮ ವಹಿಸುವುದು ಹಾಗೂ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ರಾಜೀವ ಗಾಂಧಿ ವಸತಿ ನಿಗಮಕ್ಕೆ ಪತ್ರ ವ್ಯವಹಾರ ಮಾಡಿ ಸಮಸ್ಯೆಗಳನ್ನು ಬಗೆಹರಿಸುವುಂತೆ ಕಿಂಡಿ ಅಣೆಕಟ್ಟು ಹಾಗೂ ಕೆರೆಗಳ ಆಧುಣಿಕರಣ ಕಾಮಗಾರಿಗಳನ್ನು ಆಧ್ಯತೆಯ ನೆಲೆಯಲ್ಲಿ ಕೈಗೆತ್ತಿಕೊಳ್ಳುವಂತೆ ಹಾಗೂ ಉಪ್ಪು ನೀರಿನಿಂದ ಕೃಷಿಗಳಿಗೆ ಹಾನಿಯಾಗುತ್ತಿದ್ದು ಮುಖ್ಯವಾಗಿ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಭಾಗದಲ್ಲಿ ಜನರು ಮಟ್ಟುಗುಳ್ಳ ಬೆಳೆಯುತ್ತಾರೆ. ಆದರೆ ಉಪ್ಪು ನೀರಿನಿಂದ ಈ ಕೃಷಿಗೆ ಹಾನಿ ಉಂಟಾಗುತ್ತಿದೆ ಉಪ್ಪು ನೀರಿನ ತಡೆಗೆ ಖಾರ್ಲ್ಯಾಂಡ್ ಯೋಜನೆ ಅಡಿಯಲ್ಲಿ ಕಾಮಗಾರಿ ಕೈಗೊಳ್ಳುವಂತೆ ಹಾಗೂ ಜಲ ಜೀವನ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಬಗ್ಗೆ ಮಾಹಿತಿ ಪಡೆದು ಬಾಕಿ ಉಳಿದ ಕಾಮಗಾರಿಗಳನ್ನು ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಸಭೆಯಲ್ಲಿ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಶಾಸಕರು ಸೂಚಿಸಿದರು.ಈ ಸಂದರ್ಭದಲ್ಲಿ ಕಾಪು ತಾಲೂಕು ಪಂಚಾಯತ್ ಆಡಳಿತಾಧಿಕಾರಿಗಳಾದ ಪೂರ್ಣಿಮಾ, ಕಾಪು ತಹಶೀಲ್ದಾರರಾದ ಪ್ರತೀಭಾ ಆರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ ಹಾಗೂ ಕಾಪು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.