ಉಡುಪಿ : ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸ ಕಾರ್ಯಗಳನ್ನು ಅರಸಿ ಬಂದಾಗ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಚುರುಕಾಗಿ ಕೆಲಸಗಳನ್ನು ಮಾಡಿಕೊಟ್ಟಲ್ಲಿ ಯಾವುದೇ ಸಮಸ್ಯೆಗಳು ಉಂಟಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಉಡುಪಿ ಜಿಲ್ಲಾ ಪಂಚಾಯತ್ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸ್ತುತ ಸಾಲಿನಲ್ಲಿ ವಾಡಿಕೆಗಿಂತ ಶೇಕಡ 17 ರಷ್ಟು ಹೆಚ್ಚು ಮಳೆಯಾಗಿದೆ. ಹೆಚ್ಚಿನ ಮಳೆಯಿಂದಾಗಿ ಬೆಳೆಹಾನಿ, ಮೂಲಭೂತ ಸೌಕರ್ಯಗಳಾದ ರಸ್ತೆ, ಸರ್ಕಾರಿ ಕಟ್ಟಡಗಳು, ಸೇತುವೆ ಸೇರಿದಂತೆ ಮತ್ತಿತ್ತರ ಆಸ್ತಿ ಪಾಸ್ತಿಗಳಿಗೆ ಹಾನಿವುಂಟಾಗಿದೆ. ಈ ಸಂಬಂಧ ಈಗಾಗಲೇ ಬೆಳೆಹಾನಿ, ಮಾನವ ಹಾನಿಗೆ ಸೇರಿದಂತೆ ಮತ್ತಿತ್ತರ ಹಾನಿಗಳಿಗೆ ಪರಿಹಾರವನ್ನು ನೀಡಲಾಗಿದೆ ಎಂದರು.
ಮೂಲಭೂತ ಸೌಕರ್ಯಗಳ ಹಾನಿಗಳ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಕೃತಿ ವಿಕೋಪ ಅನುದಾನದ ಅಡಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇದಕ್ಕೆ ಅನುದಾನದ ಕೊರತೆ ಇದೆ. ಈ ಬಗ್ಗೆ ಮುಂದಿನ ಅಧಿವೇಶನದ ವೇಳೆ ಮುಖ್ಯಮಂತ್ರಿಗಳ ಜಿಲ್ಲೆಯ ಶಾಸಕರೊಂದಿಗೆ ನಿಯೋಗ ಕೊಂಡೊಯ್ಯಲಾಗುವುದು. ಈ ಸಂಬಂಧ ಅನುದಾನ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು