ಕುಂದಾಪುರ : ಗ್ರಾಮ ಪಂಚಾಯಿತಿಯಲ್ಲಿ ನಡೆಯುವ ತೈಮಾಸಿಕ ಕೆಡಿಪಿ ಸಭೆಗಳಿಗೆ ಆಯಾಯ ಇಲಾಖೆಗಳ ಹೋಬಳಿ, ಗ್ರಾಮಮಟ್ಟದ ಅಧಿಕಾರಿಗಳು ಹಾಜರಾಗುವುದು ಕಡ್ಡಾಯ ಎಂದು ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
ಬೆಳಗಾವಿಯಲ್ಲಿ ನಡೆದ ವಿಧಾನ ಸಭೆಯ ಚಳಿಗಾಲದ ಅಧಿವೇಶನದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ ಗ್ರಾಪಂಗಳಲ್ಲಿ ನಡೆಸುತ್ತಿರುವ ತ್ರೈಮಾಸಿಕ ಕೆಡಿಪಿ ಸಭೆಗಳಿಗೆ ಇಲಾಖಾಧಿಕಾರಿಗಳು ನಿರಂತರ ಗೈರು ಹಾಜರಾಗುತ್ತಿದ್ದಾರೆ. ಇದರಿಂದ ಅಭಿವೃದ್ಧಿ ಕಾರ್ಯಗಳಿಗೆ ತೊಡಕುಂಟಾಗುತ್ತದೆ ಎಂದು ಸಚಿವರ ಗಮನಸೆಳೆದಾಗ ಅವರು ಉತ್ತರಿಸಿದರು