ಕುಂದಾಪುರ : ವಿಧಾನಸಭಾ ಕ್ಷೇತ್ರದ ಕೆದೂರಿನಲ್ಲಿ ಬಿಜೆಪಿ ಶಕ್ತಿ ಕೇಂದ್ರ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹಾಗೂ ಬಿಜೆಪಿ ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಜರುಗಿತು.
ಕಾರ್ಯಕರ್ತರನ್ನು ಉದ್ದೇಶಿಸಿ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು,”ಮತಗಟ್ಟೆ ಮಟ್ಟದ ಕಾರ್ಯಕರ್ತರೇ ನಮ್ಮ ನಿಜವಾದ ಶಕ್ತಿ. ಸರ್ಕಾರದ ಸೌಲಭ್ಯಗಳು ಕೊನೆಯ ಫಲಾನುಭವಿಗೂ ತಲುಪಿದಾಗ ಮಾತ್ರ ನಮ್ಮ ಜವಾಬ್ದಾರಿ ಪೂರ್ಣಗೊಳ್ಳುತ್ತದೆ. ಅದಕ್ಕಾಗಿ ಪ್ರತಿ ಬೂತ್‌ನಲ್ಲೂ ಶಕ್ತಿ ಕೇಂದ್ರದ ತಂಡ ಕ್ರಿಯಾಶೀಲವಾಗಿರಬೇಕು” ಎಂದು ಹೇಳಿದರು.
ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಪಕ್ಷದ ಯಶಸ್ಸಿನ ಮೂಲ ಬೇರು ಶಕ್ತಿ ಕೇಂದ್ರಗಳು. ಇಂದು ಆಯ್ಕೆಯಾದ ನೂತನ ಸಮಿತಿ ಸದಸ್ಯರು ತಮ್ಮ ವ್ಯಾಪ್ತಿಯ ಪ್ರತಿ ಬೂತ್‌ಗೆ ಭೇಟಿ ನೀಡಿ, ಜನರ ಸಮಸ್ಯೆ ಆಲಿಸಿ, ಸಂಘಟನೆಯನ್ನು ಗ್ರಾಮ ಮಟ್ಟದಲ್ಲಿ ವಿಸ್ತರಿಸಬೇಕು” ಎಂದು ತಿಳಿಸಿದರು.
ಇದೇ ವೇಳೆ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಯಿತು.
ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್, ಬೀಜಾಡಿ ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಉಳ್ತೂರು, ಕೆದೂರು ಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಮೊಗವೀರ, ಮುಖಂಡರಾದ ಶಾನಾಡಿ ಸಂಪತ್ ಕುಮಾರ್ ಶೆಟ್ಟಿ, ಶರತ್ ಹೆಗ್ಡೆ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು ಹಾಗೂ ಕೆದೂರು ಶಕ್ತಿ ಕೇಂದ್ರ ವ್ಯಾಪ್ತಿಯ ಕಾರ್ಯಕರ್ತರು ಈ ಸಂದರ್ಭದಲ್ಲಿ ಹಾಜರಿದ್ದರು.

