ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿಯ ಮದ್ಯದಂಗಡಿ – ಲೈಸನ್ಸ್ ಹಂಚಿಕೆ ಪ್ರಕರಣ ಸಂಬಂಧ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇ ជ (໘.໖.) ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. ಇದರೊಂದಿಗೆ, ಇದೇ ಪ್ರಕರಣದಲ್ಲಿ ದೆಹಲಿ ಸರ್ಕಾರದಲ್ಲಿ ಸಚಿವರಾಗಿದ್ದ ಸತ್ಯೇಂದ್ರ ಜೈನ್, ಮನೀಶ್ ಸಿಸೋಡಿಯಾ, ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮತ್ತು ತೆಲಂಗಾಣದ ಬಿಆರ್‌ಎಸ್ ಪಕ್ಷದ ಶಾಸಕಿ ಕೆ. ಕವಿತಾ ಬಳಿಕ ಮತ್ತೊಬ್ಬ ದೊಡ್ಡ ರಾಜಕೀಯ ನಾಯಕ ಕೇಂದ್ರದ ತನಿಖಾ ಸಂಸ್ಥೆಗಳ ಬಲೆಗೆ ಬಿದ್ದಂತಾಗಿದೆ.
ಕೇಜ್ರವಾಲ್ ಬಂಧನವನ್ನು ಆಮ್ ಆದ್ಮಿ ಸೇರಿದಂತೆ ವಿಪಕ್ಷಗಳ ನಾಯಕರು ಕಟುವಾಗಿ ಟೀಕಿಸಿದ್ದಾರೆ. ಅಲ್ಲದೆ ಬಂಧನ ಖಂಡಿಸಿ ಆಪ್ ಕಾರ್ಯಕರ್ತರುಸಿಎಂಮನೆಮುಂದೆ ಪ್ರತಿಭಟನೆ ನಡೆಸಿದ್ದಾರೆ. ಮತ್ತೊಂದೆಡೆ ನೈತಿಕ ಹೊಣೆ ಹೊತ್ತು ಕೇಜಿವಾಲ್ ರಾಜೀನಾಮೆ ನೀಡಲಿ ಎಂದು ಬಿಜೆಪಿ ಆಗ್ರಹಿಸಿದೆ.