ನವದೆಹಲಿ : ಮದ್ಯ ಲೈಸೆನ್ಸ್ ಹಗರಣದಲ್ಲಿ ಸೋಮವಾರ ತಿಹಾರ್ ಜೈಲಿಗೆ ವರ್ಗಾಯಿಸಲ್ಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಅವರಿಗೆ ವಿಚಾರಣಾಧೀನ ಕೈದಿ ನಂಬರ್ 670 ನೀಡ ಲಾಗಿದೆ. ಈ ನಡುವೆ ದೆಹಲಿ ಸಿಎಂ ರಾತ್ರಿಯಿಡೀ ನಿದ್ದೆಯಿಲ್ಲದೇ ಒದ್ದಾಡಿ ಕಳೆದರು. ಇಡೀ ರಾತ್ರಿಯಲ್ಲಿ ಸ್ವಲ್ಪ ಹೊತ್ತು ಮಾತ್ರವೇ ಅವರು ನಿದ್ದೆಗೆ ಜಾರಿದ್ದರು ಎಂದು ಜೈಲಧಿಕಾರಿ ಗಳು ಮಾಹಿತಿ ನೀಡಿದ್ದಾರೆ. ಸೋಮವಾರ ಸಂಜೆ 4 ಗಂಟೆಗೆ ಜೈಲಿಗೆ ಬಂದ ಕೇಜ್ರವಾಲ್ ಅವರನ್ನು ವೈದ್ಯಕೀಯ ತಪಾಸಣೆ ಬಳಿಕ 14X8 ಅಡಿ ಅಳತೆಯ ಕೊಠಡಿಗೆ ವರ್ಗಾಯಿಸಲಾಯಿತು