ಕುಂದಾಪುರ : ತಾಲೂಕು ಆಡಳಿತ ಕುಂದಾಪುರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ಶ್ರೀ ಲಕ್ಷ್ಮೀ ನರಸಿಂಹ ಕಲಾಮಂದಿರಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಜರುಗಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಉಪವಿಭಾಗಾಧಿಕಾರಿ ರಶ್ಮೀ ಎಸ್.ಆರ್ ವಹಿಸಿ ಮಾತನಾಡಿದರು
ಕೋಟೇಶ್ವರ ಸರಕಾರಿ ಪ್ರಥಮದರ್ಜೆ ಕಾಲೇಜಿನ ಉಪನ್ಯಾಸಕಿ ಶರಾವತಿ ಅವರು ಉಪನ್ಯಾಸ ನೀಡಿ ಕೆಂಪೇಗೌಡ ಅವರು ಬಾಲ್ಯದಿಂದಲೇ ಮಹತ್ವಾಕಾಂಕ್ಷೆಯ ಯೋಜನೆಗಳೋಂದಿಗೆ ದೂರದೃಷ್ಟಿ ಚಿಂತನೆ ಹೊಂದಿದ್ದರು ಎಂದು ನುಡಿದರು
ಸಮಾರಂಭದಲ್ಲಿ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು., ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್ ಆರ್ ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಉಪಪ್ರಾಂಶುಪಾಲ ಕಿರಣ ಹೆಗ್ಡೆ ಉಪಸ್ಥಿತರಿದ್ದರು.ಕುಂದಾಪುರ ತಹಶಿಲ್ದಾರ್ ಶೋಭಾಲಕ್ಷ್ಮಿ ಎಚ್.ಎಸ್ ಪ್ರಸ್ತಾವನೆಗೈದು ಉಪತಹಶಿಲ್ದಾರ್ ವಿನಯ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ವಂದಿಸಿದರು.

