Home » ನಾಲ್ಕು ದಿನಗಳ ಕಾಲ ಎಸ್‌ ಐ ಟಿ ವಶಕ್ಕೆ ರೇವಣ್ಣ
 

ನಾಲ್ಕು ದಿನಗಳ ಕಾಲ ಎಸ್‌ ಐ ಟಿ ವಶಕ್ಕೆ ರೇವಣ್ಣ

by Kundapur Xpress
Spread the love

ಬೆಂಗಳೂರು : ಮೈಸೂರು  ಜಿಲ್ಲೆ ಕೆ.ಆರ್.ನಗರದ ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡದ (ಎಸ್ ఐటి) ವಶಕ್ಕೆ ನ್ಯಾಯಾಧಿಶರು ಆದೇಶಿಸಿದ್ದಾರೆ.

ಭಾನುವಾರ ನ್ಯಾಯಾಲಯಕ್ಕೆ ರಜೆ ಇದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತಂಡವು, ಆರೋಪಿ ರೇವಣ್ಣ ಅವರನ್ನು ಸಂಜೆ ಕೋರಮಂಗಲದಲ್ಲಿ ರುವ ನ್ಯಾಯಾಧೀಶ ರವೀಂದ್ರ ಕುಮಾರ್ ಕಟ್ಟಿಮನಿ ಅವರ ನಿವಾಸಕ್ಕೆ ಹಾಜರುಪಡಿಸಿತು.

ಈ ವೇಳೆ ಎಸ್‌ಐಟಿ ಪರ ವಕೀಲರು ಪ್ರಕರಣದ ಗಂಭೀರತೆ ವಿವರಿಸಿ, ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಅಗತ್ಯವಿರುವುದರಿಂದ ಎಸ್‌ಐಟಿ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಇದಕ್ಕೆ ರೇವಣ್ಣ ವಕೀಲರು ಆಕ್ಷೇಪ  ವ್ಯಕ್ತಪಡಿಸಿದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಧೀಶರು ಆರೋಪಿ ರೇವಣ್ಣ ಅವರನ್ನು ನಾಲ್ಕು ದಿನಗಳ ಕಾಲ ವಶಕ್ಕೆ ಒಪ್ಪಿಸಿ ಆದೇಶಿಸಿದರು. 

ಇದಕ್ಕೂ ಮುನ್ನ ಆರೋಪಿ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯ ಕೀಯ ತಪಾಸಣೆ ಮಾಡಿಸಿದರು. ಬಳಿಕ ಭಾರೀ ಭದ್ರತೆಯಲ್ಲಿ ನ್ಯಾಯಾಧೀಶರ ನಿವಾಸಕ್ಕೆ ಕರೆದೊಯ್ದರು.

   

Related Articles

error: Content is protected !!