ಬೆಂಗಳೂರು : ಆರ್. ರುದ್ರೇಶ್ ಅವರನ್ನು 2016ರಲ್ಲಿ ಹತ್ಯೆ ಮಾಡಿದ್ದ ಪ್ರಕರಣದ ಆರೋಪಿ ಮೊಹಮ್ಮದ್ ಗೌಜ್ ನಿಯಾಜಿಯನ್ನು ರಾಷ್ಟ್ರೀಯ ತನಿಖಾ ದಳ (283) ಖಂಡದ ತಾಂಜೇನಿಯಾದಲ್ಲಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ನಿಷೇಧಿತಪಿಎಫ್ ಐಕಾರ್ಯಕರ್ತ ಮೊಹಮ್ಮದ್ ಗೌಸ್ ನಿಯಾಜಿ 8 ವರ್ಷ ಹಿಂದೆ ಬೆಂಗಳೂರಿನಲ್ಲಿ ಆರ್ ಎಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಸಂಚಿನ ಮುಖ್ಯ ಪಾತ್ರಧಾರಿ ఎంబ ಆರೋಪ ಕೇಳಿಬಂದಿತ್ತು. ಕೊಲೆ ಆದ ನಂತರ ಈತ ತಲೆಮರೆಸಿಕೊಂಡಿದ್ದ. ಬಳಿಕ ಈತನ ಕುರಿತು ಸುಳಿವು ನೀಡಿದ ವರಿಗೆ 5 ಲಕ್ಷ ರು. ಬಹುಮಾನವನ್ನು ಘೋಷಿಸಲಾಗಿತ್ತು.
ನಂತರ ಗುಜರಾತ್ ಉಗ್ರ ನಿಗ್ರಹ ದಳ (ಎಟಿಎಸ್) ಕೂಡ ತನಿಖೆಯನ್ನು ತೀವ್ರಗೊಳಿಸಿ ಈತ ಆಫ್ರಿಕಾದಲ್ಲಿ ಇರುವುದನ್ನು ಪತ್ತೆ ಮಾಡಿತ್ತು. ಅಲ್ಲಿನ ಸ್ಥಳೀಯ ಪೊಲೀಸರು ಮತ್ತು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಸಹಕಾರದೊಂದಿಗೆ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.